ವಿಜೃಂಭಣೆಯಿಂದ ಜರುಗಿದ ಮಹಾಲಕ್ಷ್ಮಿ ದೇವಿ ಜಾತ್ರೋತ್ಸವ
Mahalakshmi Devi Jatrotsava celebrated with great grandeur
ತಾಳಿಕೋಟಿ 18 : ತಾಳಿಕೋಟಿ ಪಟ್ಟಣದ ಗಣೇಶನಗರದಲ್ಲಿರುವ ಕೆಇಬಿ ಹಿಂಭಾಗದ ಮಹಾಲಕ್ಷ್ಮಿ ದೇವಿ ದೇವಸ್ಥಾನದ ಜಾತ್ರೋತ್ಸವವು ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ 8 ಗಂಟೆಗೆ ಗಂಗಸ್ಥಳ ಕಾರ್ಯಕ್ರಮ ನಡೆಯಿತು. ಬಳಿಕ ಸಂತೋಷ್ ಗುರೂಜಿ ಹಾಗೂ ತಂಡದವರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಹೋಮ-ಹವನ ಮತ್ತು ಮಹಾಪೂಜೆ ನೆರವೇರಿಸಲಾಯಿತು. ದೇವಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಲಾಯಿತು. ಮಧ್ಯಾಹ್ನ 12 ಗಂಟೆಯಿಂದ ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಮಹಾಲಕ್ಷ್ಮಿ ದೇವಸ್ಥಾನ ಕಮಿಟಿಯ ಎಲ್ಲ ಸದಸ್ಯರು ಸೇರಿದಂತೆ ಗಣೇಶನಗರ ಹಾಗೂ ಖಾಸ್ಗತ ನಗರದ ಸದ್ಭಕ್ತರು ಜಾತ್ರೋತ್ಸವದಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 