ಮಹಾಲನೋಬಿಸ್ ಕೊಡುಗೆ ಅಪಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

 ಮಹಾಲನೋಬಿಸ್ ಕೊಡುಗೆ ಅಪಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ Mahalanobis' immense contribution to the District Collector Dr. Vijaya Mahantesh Danamma

ಲೋಕದರ್ಶನ ವರದಿ

  ಹಾವೇರಿ 01:  ಪ್ರೊ. ಪಿ.ಸಿ. ಮಹಾಲನೋಬಿಸ್ ಅವರು ಭಾರತ ಕಂಡ ಅತ್ಯಂತ ಶ್ರೇಷ್ಠ ಸಂಖ್ಯಾಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದು, ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.  

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಪ್ರೊ. ಪಿ.ಸಿ. ಮಹಾಲನೋಬಿಸ್ ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಸಾಂಖ್ಯಿಕ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ದೇಶದ ಅಭಿವೃದ್ಧಿಗೆ ಅಗತ್ಯವಾದ ಸಾಮಾಜಿಕ ಹಾಗೂ ಆರ್ಥಿಕ ಯೋಜನೆಗಳನ್ನು ರೂಪಿಸುವಲ್ಲಿ ಸಂಖ್ಯಾಶಾಸ್ತ್ರದ ಪಾತ್ರ ಅತ್ಯಂತ ಪ್ರಮುಖವಾಗಿದೆ. ಈ ಕುರಿತು ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಸಂಖ್ಯಾ ಇಲಾಖೆಯ ಕಾರ್ಯ ಮಹತ್ವದ್ದಾಗಿದ್ದು, ವಿವಿಧ ಸಮೀಕ್ಷೆಗಳು ಹಾಗೂ ಅಂಕಿ-ಅಂಶಗಳ ಸಂಗ್ರಹಣೆಯಲ್ಲಿ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  

ತುಳಸಿ ಸರಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ. ಸಂತೋಷ್‌.ಸಿ. ಅವರು “ಗಟಿಟಠಞಟಿರ ಣಜ ಕಠಜಟಿಣಚಿಟ ಠ ಂಜಟಟಿಣಡಿಚಿಣತಜ ಆಚಿಣಚಿ” ವಿಷಯದ ಕುರಿತು ಉಪನ್ಯಾಸ ನೀಡಿ, ನಿಖರವಾದ ದತ್ತಾಂಶದ ಮಹತ್ವವನ್ನು ವಿವರಿಸಿದರು. ವಾಸ್ತವಿಕ ದತ್ತಾಂಶ ಆಧಾರಿತ ನಿರ್ಧಾರಗಳು ಆಡಳಿತ ವ್ಯವಸ್ಥೆಯ ಪರಿಣಾಮಕಾರಿತ್ವ ಹೆಚ್ಚಿಸುತ್ತವೆ. ತಪ್ಪಾದ ಅಂಕಿ-ಅಂಶಗಳು ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್‌., ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಆರ್‌.ಎಂ. ಭುಜಂಗ, ಜಿಲ್ಲಾ ಪಂಚಾಯತ್ ಯೋಜನಾ ಮತ್ತು ಮೌಲ್ಯಮಾಪನಾಧಿಕಾರಿ ಕೆ.ಎನ್‌. ಮಣ್ಣವಡ್ಡರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.  

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಸಹಾಯಕ ನಿರ್ದೇಶಕ ಜೆ.ಆರ್‌. ಪಾಟೀಲ ಅವರು ಸ್ವಾಗತಿಸಿದರು. ಅರುಣ ಕುಂಬಾರ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಪ್ರೇಮಾ ಸಿಂಗಾಪುರ ವಂದಿಸಿದರು.