ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ವೀಕ್ಷಣೆ: ಕಾಡಾಪುರ ಕೆರೆಗೆ ಬಾಗಿನ ಅರ್ಪಣೆ
Mahalaxmi Lift Irrigation Project View: Offering of a portion to Kadapur Lake
ಚಿಕ್ಕೋಡಿ 31: ಕೃಷಿ ಪ್ರದೇಶದ ಅಭಿವೃದ್ಧಿಗೆ ದೀರ್ಘಕಾಲಿಕ ಪರಿಹಾರ ನೀಡುವ ಉದ್ದೇಶದಿಂದ ಜಾರಿಯಲ್ಲಿರುವ 382 ಕೋಟಿ ರೂ ವೆಚ್ಚದ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರ ಕೆ. ಜಯಪ್ರಕಾಶ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಪರೀಶೀಲಿಸಿದರು.
ಈ ಯೋಜನೆಯಲ್ಲಿ ಒಳಪಡುವ 21 ಗ್ರಾಮದ ರೈತರನ್ನು ಭೇಟಿ ಮಾಡಿ ಎಲ್.ಇ.ಡಿ ಸ್ಕ್ರೀನ್ ಮುಖಾಂತರ ಯೋಜನೆಯ ಸಂಪೂರ್ಣ ತಾಂತ್ರಿಕ ವಿವರಗಳನ್ನು ಮಂಡನೆ ಮಾಡಿದರು. ನಂತರ, ನೂರಾರು ರೈತರೊಂದಿಗೆ ಸಂವಾದ ನಡೆಸಿ ಅವರ ಅಭಿಪ್ರಾಯಗಳು ಮತ್ತು ಬೇಡಿಕೆಗಳನ್ನು ಆಲಿಸಿದರು.
ಕೆ. ಜಯಪ್ರಕಾಶ ಅವರು ಮಾತನಾಡಿ ವಿಧಾನ ಪರಿಷತ್ ಸದಸ್ಯರು ಹಾಗೂ ದೆಹಲಿಯ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ಅವರ ನಿರಂತರ ಪ್ರಯತ್ನದ ಫಲವಾಗಿ ಈ ಮಹತ್ವಾಕಾಂಕ್ಷಿ ಯೋಜನೆ ಮಂಜೂರಾಗಿ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದೆ. ಯೋಜನೆ ಪೂರ್ಣಗೊಂಡ ನಂತರ ಚಿಕ್ಕೋಡಿ ತಾಲೂಕಿನ ಸಾವಿರಾರು ರೈತರಿಗೆ ನೀರಾವರಿ ಸೌಲಭ್ಯ ಲಭ್ಯವಾಗಲಿದ್ದು, ಕೃಷಿ ಉತ್ಪಾದನೆ ಹೆಚ್ಚಳ, ಬೆಳೆ ವೈವಿಧ್ಯೀಕರಣ ಹಾಗೂ ರೈತರ ಆರ್ಥಿಕ ಬಲವರ್ಧನೆಗೆ ಮಹತ್ತರ ಸಹಕಾರಿಯಾಗಲಿದೆ ಎಂದು ಹೇಳಿದರು.
ಶಾಸಕ ಗಣೇಶ ಹುಕ್ಕೇರಿ ಮಾತನಾಡಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ ಕೆನಾಲ್ ನಿರ್ಮಿಸಿದ್ದರು ಮತ್ತು ಈಗಿನ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಪ್ರಯತ್ನದಿಂದ ಕೆನಾಲ್ ಮುಖಾಂತರ ನೀರು ಹರಿದು ಕೆರೆ ತುಂಬಿದೆ ಹಾಗೂ ಬಾಗಿನ ಅರೆ್ಣ ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲದೆ, ಇದು ರೈತರ ಜೀವನದಲ್ಲಿ ನೀರಿನ ಮಹತ್ವವನ್ನು ಒತ್ತಿ ಹೇಳುವ ಸಾಂಸ್ಕೃತಿಕ ಸಂಕೇತವಾಗಿದೆ. ಈ ಪ್ರದೇಶದ ಕೃಷಿ, ಪಶುಸಂಗೋಪನೆ ಹಾಗೂ ಗ್ರಾಮೀಣ ಬದುಕಿಗೆ ಹೊಸ ಚೈತನ್ಯ ಸಿಗಲೆಂದು ಹಾರೈಸುತ್ತೇನೆ ಎಂದರು.
ಕಾಡಾಪುರ ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರ ಕೆ. ಜಯಪ್ರಕಾಶ, ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಹಾಗೂ ಸಂಸದೆಯಾದ ಪ್ರಿಯಾಂಕಾ ಜಾರಕಿಹೊಳಿ ಅವರು ಕೆರೆಗೆ ಬಾಗಿನ ಅರೆ್ಣ ಮಾಡಿದರು.
ಮುಖ್ಯ ಅಭಿಯಾಂತಿಕರು ರಾಠೋಡ್, ಅಧೀಕ್ಷಕ ಅಭಿಯಂತರ ಗಣಿ, ಚಿಕ್ಕೋಡಿ ಉಪವಿಭಾಗ ಅಧಿಕಾರಿ ಸುಭಾಷ ಸಂಪಗಾಂವಿ, ತಹಸೀಲ್ದಾರ್ ರಾಜೇಶ ಬುರ್ಲಿ, ಮುಖಂಡರಾದ ವಿನೋದ ಕಾಗೆ, ಮಲ್ಲಿಕಾರ್ಜುನ ಪಾಟೀಲ, ರಂಜಿತ ಶಿರಸೆಟ, ಪ್ರಕಾಶ ರಾಚಣ್ಣವರ, ಸಂಭಾಜಿ ಪವಾರ, ಅಪ್ಪು ಸನದಿ, ಶಿವಾಜಿ ಶಿಂಧೆ, ಮಹಾಂತೇಶ ಪಾಟೀಲ, ಅರ್ಜುನ ಗುರುನಾಥ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 