ಮಹಾಮಾರಿ ಕೊರೊನಾ ನಮ್ಮನ್ನು ಬಿಟ್ಟು ಹೋಗಲ್ಲ: ಸಚಿವ ಶ್ರೀರಾಮುಲು
ಬಳ್ಳಾರಿ17: ಈ ಮಹಾಮಾರಿ ಕೊರೊನಾ ಸೋಂಕು ನಮ್ಮನ್ನು ಬಿಟ್ಟು ಹೋಗಲ್ಲ. ಹಾಗಾಗಿ ನಾವು ಅದರ ಜೊತೆಗೇ ಪಯಣ ಬೆಳೆಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ಮಿಲ್ಲರ್ ಪೇಟೆಯಲ್ಲಿಂದು ಮಾಜಿ ಮೇಯರ್ ಇಬ್ರಾಹಿಂ ಬಾಬು ಅವರ ಸಾರಥ್ಯದಲ್ಲಿ ಆಶಾ ಕಾರ್ಯಕತರ್ೆಯರು, ವೈದ್ಯರಿಗೆ ರೇಷನ್ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕೇಂದ್ರ ಸಕರ್ಾರದಿಂದ ನಾಲ್ಕನೇ ಹಂತದ ಲಾಕ್ಡೌನ್ ಗೈಡ್ಲೈನ್ಸ್ ಇನ್ನೂ ಬರಬೇಕಿದ್ದು, ಕೆಲ ರಾಜ್ಯಗಳಲ್ಲಿ ಯಥಾಸ್ಥಿತಿ ಮುಂದುವರೆಸುವ ಚಚರ್ೆ ನಡೆದಿದೆ ಎಂದರು.
ರಾಜ್ಯದ ಪರಿಸ್ಥಿತಿಯ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯಡಿಯೂರಪ್ಪನವರಿಗೆ ಸಲಹೆ ಕೊಟ್ಟಿದ್ದಾರೆ. ಗ್ರೀನ್, ಆರೆಂಜ್ ಝೋನ್ಗಳಲ್ಲಿ ಕೆಲವು ಸಡಿಲಿಕೆ ಮಾಡಿ ಜನಜೀವನಕ್ಕೆ ಅನುವು ಮಾಡಬೇಕಿದೆ. ಈ ಮಾಹಾಮಾರಿ ನಮ್ಮನ್ನು ಬಿಟ್ಟು ಹೋಗಲ್ಲ. ಅದರ ಜೊತೆ ನಾವು ಪ್ರಯಾಣ ಬೆಳೆಸಬೇಕಿದೆ. ಇನ್ನು, ಎರಡು- ಮೂರು ವರ್ಷ ನಾವು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ರಾಜ್ಯಕ್ಕೆ ಬರುವವರನ್ನ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲು ತೀಮರ್ಾನಿಸಲಾಗಿದೆ ಎಂದು ಸಚಿವರು.
ಇನ್ನು, ಆರು ತಿಂಗಳಲ್ಲಿ ರಾಜ್ಯದಲ್ಲಿ 82 ಸಾವಿರ ಮಹಿಳೆಯರಿಗೆ ಹೆರಿಗೆಯಾಗಲಿದೆ. ಅವರಿಗೆ ತೊಂದರೆ ಆಗದಂತೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತಿದೆ.
ಆದರಲ್ಲಿ ಕಂಟೇನ್ಮೆಂಟ್ ಝೋನ್ನಿಂದ ಬಂದವರನ್ನು ಕಡ್ಡಾಯವಾಗಿ ಟೆಸ್ಟ್ ಮಾಡಲಾಗುವುದು. ರಾಜ್ಯ ಸಕರ್ಾರ ಇಷ್ಟು ದಿನ ಜನರಿಗೆ ಏನು ಬೇಕೋ ಅದನ್ನೆಲ್ಲ ಮಾಡಿದೆ. ಇನ್ಮುಂದೆ ಜನರ ಸಹಕಾರ ಮುಖ್ಯವಾಗಿರುತ್ತದೆ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 