ಮಹಾರಾಷ್ಟ್ರ: ಕೋವಿಡ್ -19 ಸೋಂಕಿತರ ಸಂಖ್ಯೆ 491ಕ್ಕೇರಿಕೆ

ಪುಣೆ, ಏ.4, ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 68 ಹೊಸ ಕೊರೋನಾ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 491ಕ್ಕೇರಿದೆ.ಆರು ಮಂದಿ ಸಾವನ್ನಪ್ಪಿದ ಬಳಿಕ ಶುಕ್ರವಾರದವರೆಗೆ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 26ಕ್ಕೇರಿದೆ.ಇದೇ ವೇಳೆ, ಒಟ್ಟು 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಔಷಧಿಗಳ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.  ಕೋವಿಡ್ 19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಎಲ್ಲಾ ವೈದ್ಯಕೀಯ ಸಾಮಗ್ರಿಗಳು ಬೇಕಾದ ಪ್ರಮಾಣದಲ್ಲಿವೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.