ಮಹಾರಾಷ್ಟ್ರ: ಸರ್ಕಾರಿ ಕಾಲೇಜುಗಳಲ್ಲಿ 19 ರಿಂದ ರಾಷ್ಟ್ರಗೀತೆ ಕಡ್ಡಾಯ
ಮುಂಬಯಿ, ಫೆ 13 : ಛತ್ರಪತಿ ಶಿವಾಜಿ ಮಹಾರಾಜರ ಜನ್ಮಶತಮಾನೋತ್ಸವ ದಿನವಾದ 19 ರಿಂದ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಮಹಾರಾಷ್ಟ್ರ ಸರಕಾರ ಚಿಂತನೆ ಮಾಡಿದೆ.
ಇದೇ 19 ರಿಂದ ಹೊಸ ನಿಯಮ ಜಾರಿಗೆ ಬರಲಿದೆ ಎಂದೂ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ.
ಅದೇ ದಿನ ಛತ್ರಪತಿ ಶಿವಾಜಿ ಅವರ ಜನ್ಮಶತಮಾನೋತ್ಸವ ದಿನವೂ ಆಗಿದೆ ಎಂದಿರುವ ಅವರು, ಸಿನಿಮಾ ಆರಂಭವಾಗುವ ಮುನ್ನ ಸಿನಿಮಾ ಟಾಕಿಸ್ ಗಳಲ್ಲಿ ರಾಷ್ಟ್ರಗೀತೆ ಹಾಡುವ ಮಾದರಿಯಲ್ಲೇ, ಕಾಲೇಜಿನ ಕಾರ್ಯಕ್ರಮಗಳ ಆರಂಭಕ್ಕೆ ಮೊದಲು ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡವುದನ್ನೂ ಕಡ್ಡಾಯ ಮಾಡಲಾಗುವುದು ಎಂದೂ ಸಚಿವರು ಹೇಳಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 