ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕನ್ನಡಿಗರು, ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಪ್ರಚಾರ

ಬೆಂಗಳೂರು, ಅ.15:      ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಅವರು ಪಕ್ಷದ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ ಮತದಾರರನ್ನು ಸೆಳೆಯಲಿದ್ದಾರೆ. ಮಹಾರಾಷ್ಟ್ರಕ್ಕೆ ನಾಳೆ ಯಡಿಯೂರಪ್ಪ ಹೊರಡಲಿದ್ದಾರೆ. ಬುಧವಾರ ಅವರು ಸಾಂಗ್ಲಿ, ಸೋಲಾಪುರ, ಅಕ್ಕೋಲಕೊಟ್, ಚಾಕೂರು, ಲಾತೂರು ಎಂಬಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ತಿಳಿಸಿದೆ. ಗುರುವಾರ ಕಲಬುರಗಿಯ ಗಂಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ರಾಜ್ಯ ರಾಜಧಾನಿಗೆ ಹಿಂದಿರುಗಲಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮತ್ತು ಲಿಂಗಯತರನ್ನು ಸೆಳೆಯಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಚಾರಕ್ಕೆ ಮತ್ತೋರ್ವ ಲಿಂಗಾಯತ ನಾಯಕರಾದ ಉಪ ಮುಖ್ಯಮಂತ್ರಿಗಳಾದ ಲಕ್ಷ್ಣಣ್ ಸವದಿ ಅವರನ್ನೂ ಕಳುಹಿಸಲಿದೆ. ಅದೇ ರೀತಿ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ್ ನಾರಾಯಣ್ ಅವರನ್ನೂ ಪ್ರಚಾರಕ್ಕೆ ಇಳಿಸಲಿದೆ.