ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; 3239 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರ

ಮುಂಬೈ, ಅ.24:      ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಬಿಗಿಭದ್ರತೆಯ ನಡುವೆ ಆರಂಭಗೊಂಡಿದೆ. ಅಕ್ಟೋಬರ್ 21ರಂದು ರಾಜ್ಯ 288 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಶೇ. 60.46 ರಷ್ಟು ಮತದಾನ ದಾಖಲಾಗಿತ್ತು. ಸುಮಾರು 269 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸುಮಾರು 25,000 ಉದ್ಯೋಗಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸಲಾಗಿದೆ. ಈ ಮಧ್ಯೆ, ಎಣಿಕೆಯ ಪ್ರಕ್ರಿಯೆಯ ಸುಗಮವಾಗಿ ನಡೆಸಲು ರಾಜ್ಯದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 235 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 3239 ಅಭ್ಯರ್ಥಿಗಳು ಈ ಬಾರಿ ಕಣದಲ್ಲಿದ್ದಾರೆ.