ಮಹಾರಾಷ್ಟ್ರ ಚುನಾವಣೆ; ಪ್ರಚಾರಕ್ಕೆ ಧುಮುಕಿದ ಸಿದ್ದರಾಮಯ್ಯ

ಬೆಂಗಳೂರು, ಅ 17:     ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಿತರರು ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಪ್ರಚಾರಕ್ಕೆ ಧುಮುಕಿದ್ದಾರೆ.     

ಗುರುವಾರ ಮಹಾರಾಷ್ಟ್ರದ ಸಾಂಗ್ಲಿಗೆ ತೆರಳಿರುವ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಪೃಥ್ವಿರಾಜ್ ಗುಲಾಬ್ ರಾವ್ ಪಾಟೀಲ್ ಪರ ಪ್ರಚಾರ ನಡೆಸಲಿದ್ದಾರೆ. ಇವರನ್ನು  ಮಹಾರಾಷ್ಟ್ರ ಕಾಂಗ್ರೆಸ್ ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು.    

ಬಿಜೆಪಿ ಪರವಾಗಿ ಈಗಾಗಲೇ ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಹಾಗೂ ಡಾ.ಅಶ್ವಥ್ ನಾರಾಯಣ ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.  

 ರಾಜ್ಯದಲ್ಲಿ ಅ.21ರಂದು ಚುನಾವಣೆ ನಡೆಯಲಿದ್ದು, ಅ. 24ರಂದು ಮತ ಎಣಿಕೆ ನಡೆಯಲಿದೆ.