ಮಹರ್ಷಿ ಭಗೀರಥ ಜಯಂತಿ ಆಚರಣೆ

Maharishi Bhagirath Jayanti Celebration

ಲೋಕದರ್ಶನ ವರದಿ 

ಮಹರ್ಷಿ ಭಗೀರಥ ಜಯಂತಿ ಆಚರಣೆ 

ಹಾವೇರಿ 05: ಹಾವೇರಿಯ ಗಾಂಧಿ ಭವನದಲ್ಲಿ ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ  ಇಲಾಖೆ  ಹಾಗೂ ಹಾವೇರಿ ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ವತಿಯಿಂದ ಮಂಗಳವಾರ ಶ್ರೀ ಮಹರ್ಷಿ ಭಗೀರಥ ಜಯಂತಿ ಆಚರಿಸಲಾಯಿತು.  

ಜಿಲ್ಲಾ ಉಸ್ತವಾರಿ ಸಚಿವ ಶಿವಾನಂದ ಪಾಟೀಲ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. 

ಉಪನ್ಯಾಸಕರಾಗಿ ಭಾಗವಹಿಸಿದ್ದ ಸತೀಶ್ ಮಾತನಾಡಿ "ಭಗೀರಥ ಮಹರ್ಷಿ ಘೋರ ತಪಸ್ಸಿನ ಮೂಲಕ ಪವಿತ್ರ ಗಂಗೆಯನ್ನು ಭೂಮಿಗೆ ತಂದ ಚೈತನ್ಯದ ಚಿಲುಮೆ ಹಾಗೂ ಛಲಗಾರ. ಭಗೀರಥರು ಅಸಾಧ್ಯವನ್ನು ಕಠಿಣ ಪ್ರಯತ್ನದ ಮೂಲಕ ಸಾಧ್ಯ ಮಾಡುವುದನ್ನು ತೋರಿಸಿದ್ದಾಗಿದೆ. ತಪಸ್ಸಿನಿಂದ ಗಂಗೆಯನ್ನು ಭೂಮಿಗೆ ತಂದು ತನ್ನ ಹಿರಿಯರಿಗೆ ಜಲದರ​‍್ಣ ಮಾಡಿದ ಭಗೀರಥನ ಸಾಧನೆ ಅಸಮಾನ್ಯ. ಇದು ಪರಿಶ್ರಮ ಮತ್ತು ಕಠಿಣ ನಿರ್ಣಯಗಳ ಮೂಲಕ ಜಯ ಸಾಧಿಸಬಹುದು ಎಂಬುದಕ್ಕೆ ಮುನ್ನುಡಿಯಾಗಿದೆ. ಭಗೀರಥ ಮಹಿರ್ಷಿಗಳ ಅರಿತು, ಅವರ ಮಾರ್ಗದಲ್ಲಿ ನಡೆಯುವ ಅವಶ್ಯಕತೆ ಇದೆ ಎಂದರು. 

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಸಭಾ ಸದಸ್ಯ ಸಂಜೀವ ನೀರಲಗಿ, ಅಪರ ಜಿಲ್ಲಾಧಿಕಾರಿ ಎಲ್‌.ನಾಗರಾಜ್‌. ತಹಶೀಲ್ದಾರ್ ಶರಣಮ್ಮ ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಆರ್‌.ಸಿ.ಚಿನ್ನಿಕಟ್ಟಿ, ಸಮಾಜದ ಜಿಲ್ಲಾಧ್ಯಕ್ಷ  ಮಂಜುನಾಥ ಉಪ್ಪಾರ ಸೇರಿದಂತೆ ಅನೇಕರು ಉಪ್ಥಿತರಿದ್ದರು.