ಜಿಲ್ಲಾಡಳಿತದಲ್ಲಿ ಮಹರ್ಷಿ ಭಗೀರಥರ ಜಯಂತಿ ಆಚರಣೆ
Maharishi Bhagirath Jayanti celebrated in the district administration
ಗದಗ 23: "ಜಲವೇ ಜೀವನ" ಎಂಬ ತತ್ವಕ್ಕೆ ಸಾಕ್ಷಿಯಾಗಿ, ಸಕಲ ಜೀವರಾಶಿಗಳ ಉದ್ಧಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಲೋಕಕಲ್ಯಾಣಕ್ಕಾಗಿ ಅಸಾಧ್ಯವಾದುದನ್ನು ಸಾಧಿಸಿದ ಮಹಾನ್ ಪುರುಷ ಮಹರ್ಷಿ ಭಗೀರಥ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಶ್ಲಾಘಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗುರುವಾರ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಜಿಲ್ಲಾಡಳಿತ ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಸಾಂಕೇತಿಕವಾಗಿ ಪುಷ್ಪಾರ್ಚೆನೆಯೊಂದಿಗೆ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿದ ನೀರಿಲ್ಲದೆ ಜೀವನವಿಲ್ಲ ಎಂಬ ಸತ್ಯವನ್ನು ಹೇಳಿದರು.
ಮಾನವ ಸಂಕುಲವು ನದಿಗಳ ತೀರದಲ್ಲಿಯೇ ನಾಗರಿಕತೆಗಳನ್ನು (ಹರ್ಪ, ಮೊಹೆಂಜೋದಾರೊ ಮತ್ತು ಸಿಂಧೂ ನಾಗರಿಕತೆ) ಬೆಳೆಸಿಕೊಂಡಿರುವುದು ಜಲದ ಪ್ರಾಮುಖ್ಯತೆಯನ್ನು ಸಾರುತ್ತದೆ ಅಂತಹ ಪವಿತ್ರ ಗಂಗೆಯನ್ನು ಭೂಮಿಗೆ ತಂದ ಭಗೀರಥರ ಕಾರ್ಯ ಸ್ಮರಣೀಯವಾದುದು ಎಂದು ಹೇಳಿದರು.ಮೂರು ಲೋಕಗಳಲ್ಲಿ ಗಂಗೆ ಭಗೀರಥರು ಕೇವಲ ಭೂಮಿಗೆ ಮಾತ್ರವಲ್ಲದೆ ಪಾತಾಳ, ಭೂಮಿ ಮತ್ತು ಆಕಾಶ ಎಂಬ ಮೂರೂ ಲೋಕಗಳಲ್ಲಿ ಗಂಗೆಯು ನೆಲೆಸುವಂತೆ ಮಾಡಿದರು. ಈ ಮೂಲಕ ಸಕಲ ಜೀವರಾಶಿಗಳಿಗೂ ಅನುಕೂಲ ಮಾಡಿಕೊಟ್ಟರು ಎಂದು ತಿಳಿಸಿದರು.
ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದಾದರೆ, ಅಸಾಧ್ಯವಾದುದನ್ನು ಸಾಧ್ಯವಾಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂಬ ಪಾಠವನ್ನು ಭಗೀರಥರ ಜೀವನದಿಂದ ಕಲಿಯಬೇಕಿದೆ. ಅವರ ದಿಟ್ಟ ನಿರ್ಧಾರ ಮತ್ತು ಕಠಿಣ ಪ್ರಯತ್ನವು ಇಂದಿನ ಸಮಾಜಕ್ಕೆ ದೊಡ್ಡ ಪ್ರೇರಣೆಯಾಗಿದೆ.ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ಈ ಮಹಾನ್ ಚೇತನದ ಜನ್ಮದಿನಾಚರಣೆಯ ಸಂದರ್ಭದಲ್ಲಿ ಅವರ ಗುಣಗಾನ ಮಾಡುವುದು ನಮ್ಮೆಲ್ಲರ ಪುಣ್ಯದ ಕೆಲಸವಾಗಿದೆ ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅಭಿಪ್ರಾಯಪಟ್ಟರು.ಮಂಜುನಾಥ ಹುಯಿಲಗೋಳ ಸರ್ವರನ್ನು ಸ್ವಾಗತಿಸಿ ವಂದಿಸಿದರು. ಮಹರ್ಷಿ ಭಗೀರಥರ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಹಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜು ಸೊಪಡ್ಲ, ಬಿ. ಎಫ್. ಉಪ್ಪಾರ, ಪ್ರಧಾನ ಕಾರ್ಯದರ್ಶಿ ರಾಜು ಗಡ್ಡಿ, ಮರ್ಹಷಿ ಶ್ರೀ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಭೀಮನಗೌಡ ಪಾಟೀಲ್, ಸಮಾಜ ಮುಖಂಡರು ಹನುಮಂತಪ್ಪ ಗರಗ, ಚನ್ನಬಸವ್ವ ಸಾವಕ್ಕನವರ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 