ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಕ್ಟೋಬರ 13 ರಂದು ಮಹಷರ್ಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನವನಗರದ ಡಾ.ಬಿ.ಆರ್.ಅಂಬೇಢ್ಕರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹಷರ್ಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರ ಮೂಲಕ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ಜಿಲ್ಲಾ ನ್ಯಾಯಾಲಯ, ಎಸ್.ಬಿ.ಐ ಬ್ಯಾಂಕ್, ಎಲ್.ಐ.ಸಿ ಕಚೇರಿ ಮಾರ್ಗವಾಗಿ ಅಂಬೇಡ್ಕರ ಭವನಕ್ಕೆ ಮುಕ್ತಾಯವಾಗಲಿದೆ. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸುವರು.
ಅಧ್ಯಕ್ಷತೆಯನ್ನು ಶಾಸಕ ವೀರಣ್ಣ ಚರಂತಿಮಠ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ, ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸುವರು. ಅಮೀನಗಡದ ಸಂಗಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾದ್ಯಾಪಕ ಆರ್.ಜಿ.ಸನ್ನಿ ಅತಿಥಿ ಉಪನ್ಯಾಸ ನೀಡುವರು.