ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
Maharishi Valmiki Jayanti is celebrated today.
ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ತಾಳಿಕೋಟಿ 06: ತಾಲೂಕಾಡಳಿತ,ತಾಲೂಕ ಪಂಚಾಯತ ತಾಳಿಕೋಟಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ಅ.7) ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುವುದು.ಬೆಳಿಗ್ಗೆ 10.30 ಘಂಟೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಭವ್ಯ ಮೆರವಣಿಗೆ ತಹಸಿಲ್ದಾರ್ ಕಾರ್ಯಾಲಯದಿಂದ ಆರಂಭವಾಗಿ ಬಸ್ ನಿಲ್ದಾಣ, ಮಹಾರಾಣಾ ಪ್ರತಾಪ್ ಸಿಂಹ ವೃತ್ತ, ಶಿವಾಜಿ ಸರ್ಕಲ್, ಕತ್ರಿ ಬಜಾರ್, ಶ್ರೀ ಅಂಬಾಭವಾನಿ ಮಂದಿರ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದ ಮೂಲಕ ಹಾದು ಮಹರ್ಷಿ ವಾಲ್ಮೀಕಿ ವೃತದಿಂದ ವಾಲ್ಮೀಕಿ ಭವನಕ್ಕೆ ತಲುಪುವದು.ನಂತರ ಅಲ್ಲಿಯೇ ಬೆಳಿಗ್ಗೆ 11:30 ಘಂಟೆಗೆ ವೇದಿಕೆ ಕಾರ್ಯಕ್ರಮ ಜರುಗುವುದು.
ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಘನ ಉಪಸ್ಥಿತಿ ಇರುವುದು. ಕೆ ಎಸ್ ಡಿ ಎಲ್ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ)ಅವರ ಅಧ್ಯಕ್ಷತೆ ಹಾಗೂ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲರ ಸಹ ಅಧ್ಯಕ್ಷತೆ ಇರುವುದು. ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎನ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಸಂಸದೆ ಸುಧಾ ಮೂರ್ತಿ, ವಿಧಾನ ಪರಿಷತ್ತಿನ ಸದಸ್ಯರಾದ ಸುನೀಲಗೌಡ ಬಿ. ಪಾಟೀಲ,ಹಣಮಂತ ನಿರಾಣಿ, ಪಿ.ಎಚ್.ಪೂಜಾರ, ಕೇಶವ ಪ್ರಸಾದ್ ಎಸ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್,ಕ.ಬಾ.ಅ.ಧಾ. ಅಧ್ಯಕ್ಷ ಸಂಗಮೇಶ ಅ. ಬಬಲೇಶ್ವರ, ಪುರಸಭೆ ಅಧ್ಯಕ್ಷೆ ಜುಬೇದಾ ಹುಸೇನಭಾಷಾ ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಅ. ಕುಂಬಾರ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ, ನಿವೃತ್ತ ಮುಖ್ಯ ಶಿಕ್ಷಕ ಎಲ್.ಬಿ.ಕೊಡೆಕಲ್, ಉಪನ್ಯಾಸಕ ಡಾ.ಸುರೇಶ ಕೆ.ಹರನಾಳ, ತಹಸಿಲ್ದಾರ್ ಡಾ.ವಿನಯಾ ಹೂಗಾರ,ತಾಪಂ.ಇಓ ಅನಸೂಯಾ ಚಲವಾದಿ, ಸಮಾಜ ಕಲ್ಯಾಣ ಇಲಾಖೆ ಸಹ ನಿರ್ದೇಶಕಿ ಬಿ.ಜಿ.ಮಠ, ಸಿಪಿಐ ಮಹಮ್ಮದ್ ಫಸಿವುದ್ದೀನ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ ಹಾಗೂ ವಾಲ್ಮೀಕಿ ಸಮಾಜದ ಬಾಂಧವರು ಉಪಸ್ಥಿತರಿರುವರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 