ಬಿ.ಎಲ್‌.ಡಿ.ಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ವಿಜಯಪುರ, ಅ. 17: ನಗರದ ಬಿ.ಎಲ್‌.ಡಿ.ಇ ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. 

ಇಂದು ಗುರುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಮ ಕುಲಾಧಿಪತಿ ಡಾ. ವೈ. ಎಂ. ಜಯರಾಜ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಬಿ.ಎಲ್‌.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ .ಎಂ. ಹೊನ್ನುಟಗಿ ವೈದ್ಯರಾದಡಾ. ಆನಂದ ಅಂಬಲಿ, ಡಾ. ಎಸ್‌. ಎಸ್‌. ದೇವರಮನಿ ಡಾ. ತೇಜಸ್ವಿನಿ ವಲ್ಲಭ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯಡಾ. ರಘುವೀರಕುಲಕರ್ಣಿ, ವಿವಿಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಪಾಲ್ಗೋಂಡು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.