ಮಹಾಶಿವರಾತ್ರಿ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ
Mahashivratri and Jatra Festival Program
ಲೋಕದರ್ಶನ ವರದಿ
ಹಾನಗಲ್ 15: ಕುಮಾರೇಶ್ವರ ನಗರ ಅಭಿವೃದ್ಧಿ ಸಂಘದ ವತಿಯಿಂದ ಸಂಜೆ 5.30ಗಂಟೆಗೆ ನಗರದ ಬೆಳಗಾವಿ ರಸ್ತೆಯ ಕುಮಾರೇಶ್ವರ ನಗರದ ಈಶ್ವರ ದೇವಸ್ಥಾನದ ಹಾನಗಲ್ ಕುಮಾರ ಶಿವಯೋಗಿಗಳ ಮಂಟಪದಲ್ಲಿ ಮಹಾಶಿವರಾತ್ರಿ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಅಂದು ಬೆಳಿಗ್ಗೆ ಈಶ್ವರ ಮೂರ್ತಿಗೆ ರುದ್ರಾಭಿಷೇಕ ಮತ್ತು ಪಾಲಿಕೋತ್ಸವ ಹಾಗೂ ಸುಮಂಗಲೆಯರ ಕುಂಭಗಳೊಂದಿಗೆ ಬಡಾವಣೆಯಲ್ಲಿ ಸಂಚರಿಸಲಾಗುವುದು. ಅಮ್ಮಿನಭಾವಿಯ ಶ್ರೀ ಸಂಸ್ಥಾನ ಪಂಚಗೃಹ ಹಿರೇಮಠದ ಪೂಜ್ಯ ಷ.ಭ್ರ.ಅಭಿನವ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಲಿದ್ದಾರೆ. ಕುಮಾರೇಶ್ವರ ನಗರ ಅಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀಕಾಂತ ಹಲಗತ್ತಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅಮೃತ ದೇಸಾಯಿ ಮತ್ತು ಹು-ಧಾ ಮಹಾನಗರ ಪಾಲಿಕೆ ಸದಸ್ಯೆ ಅನಿತಾ ಚಳಗೇರಿ ಆಗಮಿಸುವರು.
ನಂತರ ದರ್ಬಾ ಸಂಗೀತ ಕಲಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಹಾಗೂ ವಿದುಷಿ ಭಾರ್ಗವಿ ಕುಲಕರ್ಣಿ ಇವರ ಭಕ್ತಿ ಸಂಗೀತ ಕಾರ್ಯಕ್ರಮ ಹಾಗೂ ಭರತನಾಟ್ಯ ಕಾರ್ಯಕ್ರಮಗಳು ಜರುಗಲಿವೆ ಎಂದು ಸಂಚಾಲಕ ಪ್ರಕಾಶ ಬಾಳಿಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 