ತಡವಲಗಾದಲ್ಲಿ ಮಹಾಶಿವರಾತ್ರಿ ಅದ್ದೂರಿಯಾಗಿ ಆಚರಣೆ
Mahashivratri celebrated in Tadavalaga with grandeur
ಇಂಡಿ 15: ಮಹಾಶಿವರಾತ್ರಿ ಹಬ್ಬದ ನಿಮಿತ್ತವಾಗಿ ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಜೋಡಗುಡಿಯ ಮರುಳಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಶಿವನ ಮೂರ್ತಿಗೆ ಪಂಚಾಮೃತ ಅಭಿಷೇಕ ಪೂಜೆ ಸಲ್ಲಿಸಲಾಯಿತು.
ಮಹಾಶಿವರಾತ್ರಿ ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬವಾಗಿದ್ದು, ಶಿವ ಮತ್ತು ಶಕ್ತಿ (ಪಾರ್ವತಿ) ಸಮ್ಮಿಲನದ ಸಂಕೇತವಾಗಿದೆ. ಅಜ್ಞಾನದ ಕತ್ತಲೆಯನ್ನು ಕಳೆದು ಜ್ಞಾನದ ಬೆಳಕನ್ನು ಪಡೆಯಲು, ಶಿವನು ಲಿಂಗರೂಪಿಯಾಗಿ ಅವತರಿಸಿದ ದಿನದ ನೆನಪಿನಲ್ಲಿ ಭಕ್ತರು ದಿನವೀಡೀ ಉಪವಾಸ, ಜಾಗರಣೆ ಹಾಗೂ ಬಿಲ್ವಪತ್ರೆ ಪೂಜೆ ಮೂಲಕ ಶ್ರದ್ಧಾಭಕ್ತಿಯಿಂದ ಶಿವನನ್ನು ಆರಾಧಿಸುತ್ತಾರೆ.ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು.
ಈ ಹಬ್ಬದಂದು ದಿನವೀಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ ಎಂದು ಹೇಳುತ್ತಾರೆ ಗ್ರಾಮದ ಹಿರಿಯರು.ಹಾಗೂ ಶಿವರಾತ್ರಿಯ ದಿನ ಇಂದು ದೇವರ ಪೂಜಾರಿ ರೇವಪ್ಪ ಮಲ್ಕಪ್ಪ ಪೂಜಾರಿ (ಕಡ್ಡಿ) ಅವರು ಗ್ಬೆರಾಮದ ಒಳೆತ್ಳತಿಗಾಗಿ ಮರುಳಸಿದ್ದೇಶ್ವರ ಗ್ರಾಮಕ್ಕೆ ಸಕಲ ಸಂಪತ್ತು ಮತ್ತು ಮಳೆ ಬೆಳೆ ಚೆನ್ನಾಗಿ ಆಗಲಿ ಎಂದು ಒಂದು ದಿನದ ಮಟ್ಟಿಗೆ ಮೌನ ಅನುಷ್ಠಾನ ಮಾಡುತ್ತಿದ್ದುದು ಕೂಡಾ ಕಂಡು ಬಂತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 