ಬಳ್ಳಾರಿ 24:
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಷರ್ಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿ.ರಾಮ್
ಪ್ರಸಾತ್ ಮನೋಹರ್ ಅವರು ಮಹಷರ್ಿ ವಾಲ್ಮೀಕಿ
ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ
ಸಲ್ಲಿಸಿದರು. ಜಿಪಂ ಮುಖ್ಯ ಕಾರ್ಯನಿವರ್ಾಹಕ
ಅಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ ರಂಗರಾಜನ್, ಅಪರ
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ
ಅವರು ಪುಷ್ಪಾರ್ಚನೆ ಮಾಡಿ ಮಹಷರ್ಿಗೆ ನಮಿಸಿದರು.
ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪಿ.ಶುಭಾ, ಕನ್ನಡ
ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಬಿ.ನಾಗರಾಜ, ವಾತರ್ಾ
ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕ ಬಿ.ಕೆ.ರಾಮಲಿಂಗಪ್ಪ,
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಸಮುದಾಯಗಳ ಮುಖಂಡರು ಇದ್ದರು.
ಬಳ್ಳಾರಿ ಲೋಕಸಭಾ ಉಪಚುನಾವಣೆ ನಿಮಿತ್ತ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ
ಮಹಷರ್ಿ ವಾಲ್ಮೀಕಿ ಜಯಂತಿಯನ್ನು ಈ ಬಾರಿ ಸರಳವಾಗಿ
ಜಿಲ್ಲಾಡಳಿತದ ವತಿಯಿಂದ ಆಚರಿಸಲಾಯಿತು.