ಮಾಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಾಗೃತಿ ಅಭಿಯಾನ

ಇಂಡಿ 16 :  38 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯಶಸ್ವಿಗೋಳಿಸು ಉದ್ದೇಶದಿಂದ ಪ್ರತಿ ಪಂಚಾಯಿತಿ ವ್ಯಾಪ್ತಿಯ ಜಾಗೃತಿ  ಅಭಿಯಾನ ಆರಂಭಿಸಲಾಗಿದೆ ,ತಾಲೂಕಿನ ಪ್ರತಿ ಗ್ರಾಮದ ಗ್ರಂಥಾಲಯ, ನ್ಯಾಯಬೆಲೆ ಅಂಗಡಿ ,ಹಾಲಿನ ಕೇಂದ್ರ , ಅಂಗನವಾಡಿ ಕೇಂದ್ರಗಳಲ್ಲಿ ಬೇಡಿಕೆ ಪತ್ರವನ್ನು ಸಂಗ್ರಹಿಸಲಾಗುತ್ತದೆ.ಪ್ರತಿ ಮನೆ ಮನೆಗೆ ಭೇಟಿ ನೀಡಿ ಹಾಗೂ ಸ್ವಚ್ಛ ವಾಹಿನಿ ವಾಹನದಲ್ಲಿ ನರೇಗಾ ಹಾಡುಗಳು ಹಾಕುವುದರ ಮೂಲಕ ಉದ್ಯೋಗ ಖಾತ್ರಿ ಬಗ್ಗೆ ಜಾಗೃತಿ ಸಹ ಮೂಡಿಸಲಾಗುತ್ತಿದೆ.  

ಅಕ್ಟೋಬರ್ 2 ರಿಂದ ಅಕ್ಟೋಬರ್ 31 ರವರೆಗೆ ಜಿಲ್ಲಾ ಪಂಚಾಯತಿ ಮಾರ್ಗದರ್ಶನದಂತೆ ಅಭಿಯಾನ ಆರಂಭಿಸಲಾಗಿದೆ.ಎಲ್ಲರಿಗೂ ಸಮರ​‍್ಕವಾಗಿ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ತಾಲೂಕಿನ 38 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೇಡಿಕೆ ಪೆಟ್ಟಿಗೆ ಸ್ಥಾಪಿಸಲಾಗಿದೆ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿ ಉದ್ಯೋಗ ಖಾತರಿ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಹಾಗೂ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಪತ್ರ ಸ್ವೀಕರಿಸಲಾಗುತ್ತದೆ.ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನ ಕೆಲಸ ಖಾತ್ರಿ ಆಗಿದೆ. 

ಎಲ್ಲರಿಗೂ ಸಮಾನ ಕೂಲಿ ಪ್ರತಿದಿನ 349 ರೂ.ಹಿರಿಯ ನಾಗರಿಕರಿಗೆ ವಿಶೇಷ ಚೇತನರಿಗೆ ಕೆಲಸದಲ್ಲಿ ಶೇ 50ಅ ರಷ್ಟು ರಿಯಾಯಿತಿ. ಮಹಿಳೆಯರಿಗೆ ಇನ್ನಿತರ ಸೌಲಭ್ಯಗಳು ಇರಲಿವೆ ಎಂದು ತಾಲೂಕು ಪಂಚಾಯಿತಿ ಸಾಹಯಕ ನಿರ್ದೇಶಕರಾದ ಸಂಜಯ ಖಡಗೇಕರ ಹೇಳಿದರು.ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಅವರು ಮಾತನಾಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 2025 -26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಅಕ್ಟೋಬರ್ 2 ರಿಂದ ಒಂದು ತಿಂಗಳ ಕಾಲ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಉದ್ಯೋಗ ಖಾತ್ರಿ ನಡೆಗೆ ಸಬಲತೆಯಡೆಗೆ ಅಭಿಯಾನ ಆರಂಭಿಸಲಾಗಿದೆ ಎಂದು ಹೇಳಿದರು.