ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ : ಗ್ರಾಮೀಣ ಕೂಲಿಕಾರರ ಬಾಕಿ ಕೂಲಿ ಹಣ ರೂ.7.11 ಕೋಟಿ ಬ್ಯಾಂಕ್ ಖಾತೆಗೆ ಜಮೆ
Mahatma Gandhi National Rural Employment Guarantee Scheme: Rs. 7.11 crore of arrears of rural labour
ಲೋಕದರ್ಶನ ವರದಿ
ಹಾವೇರಿ :ಮೇ 19 : ನರೇಗಾ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದ ಸಾವಿರಾರು ಕುಟುಂಬಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿ ಕೆಲಸ ನಿರ್ವಹಿಸಿದ್ದು, 2025-26ನೇ ಸಾಲಿನಲ್ಲಿ ರೂ. 4.11 ಕೋಟಿ ಹಾಗೂ 2026-27ನೇ ಸಾಲಿನಲ್ಲಿ ರೂ. 3.10 ಕೋಟಿ ಸೇರಿ 7.11 ಕೂಲಿ ಹಣವನ್ನು ಇತ್ತೀಚೆಗೆ ಕೂಲಿಕಾರರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯಕಾರ್ಯನಿರ್ವಹಣಾಧಿಕಾರಿ ದಲ್ಮೀಶ್ ಕುಮಾರ ಅವರು ತಿಳಿಸಿದ್ದಾರೆ.
ಗ್ರಾಮೀಣ ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಬಾಕಿ ಉಳಿದಿದ್ದ ಕೂಲಿ ಹಣವನ್ನು ಸರ್ಕಾರದಿಂದ ಬಿಡುಗಡೆಗೊಂಡ ಅನುದಾನದ ಆಧಾರದ ಮೇಲೆ ಯಶಸ್ವಿಯಾಗಿ ಪಾವತಿಸಲಾಗಿದೆ.
ಶಾಶ್ವತ ಆಸ್ತಿ ನಿರ್ಮಾಣ: ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ಬಡ ಹಾಗೂ ನಿರುದ್ಯೋಗಿ ಕುಟುಂಬಗಳಿಗೆ ವರ್ಷಕ್ಕೆ 100 ದಿನಗಳ ಅಕುಶಲ ಕೂಲಿ ಉದ್ಯೋಗವನ್ನು ಖಾತ್ರಿ ಪಡಿಸುವ ಮಹತ್ವದ ಯೋಜನೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿಯೂ ಯೋಜನೆಯ ಅನುಷ್ಠಾನ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಗ್ರಾಮೀಣ ಭಾಗದಲ್ಲಿ ಕೆರೆ ಅಭಿವೃದ್ಧಿ, ಕಾಲುವೆ ಸ್ವಚ್ಛತೆ, ಮಣ್ಣು ಕಾಮಗಾರಿ, ಗಿಡ ನೆಡುವುದು, ರಸ್ತೆ ಅಭಿವೃದ್ಧಿ, ಜಲ ಸಂರಕ್ಷಣೆ ಸೇರಿದಂತೆ ವಿವಿಧ ಶಾಶ್ವತ ಆಸ್ತಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಮಹಿಳಾ ಕೂಲಿಕಾರರ ಪಾಲ್ಗೊಳ್ಳುವಿಕೆ ಹೆಚ್ಚಳ : ಜಿಲ್ಲೆಯ ಹಲವಾರು ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರು, ರೈತ ಕುಟುಂಬಗಳು, ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ವಿಶೇಷವಾಗಿ ಮಹಿಳಾ ಕೂಲಿಕಾರರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದು ಯೋಜನೆಯ ಪ್ರಮುಖ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಉದ್ಯೋಗಕ್ಕೆ ಬೇಡಿಕೆ ಸಲ್ಲಿಸಿ: ಉದ್ಯೋಗದ ಅವಶ್ಯಕತೆ ಇರುವ ಗ್ರಾಮೀಣ ಕುಟುಂಬಗಳು ತಮ್ಮ ಗ್ರಾಮ ಪಂಚಾಯತಿಯಲ್ಲಿ ನಮೂನೆ-6 ಸಲ್ಲಿಸಿ ಉದ್ಯೋಗಕ್ಕೆ ಬೇಡಿಕೆ ನೀಡಬೇಕು. ಬೇಡಿಕೆ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಅವರ ಗ್ರಾಮದಲ್ಲಿಯೇ ಅಕುಶಲ ಕೂಲಿ ಕೆಲಸ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೂಲಿ ಪಾವತಿಗೆ ಕ್ರಮ: ಕೂಲಿಕಾರರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿ ಆಗುವಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಯೋಜನೆಯ ಪಾರದರ್ಶಕ ಅನುಷ್ಠಾನಕ್ಕೆ ಜಿಲ್ಲಾಡಳಿತ ಬದ್ಧವಾಗಿದೆ. ಜೊತೆಗೆ ನರೇಗಾ ಯೋಜನೆಯಡಿ ಹೆಚ್ಚು ಹೆಚ್ಚು ಜನರು ಉದ್ಯೋಗ ಪಡೆದು ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.
ರಾಜ್ಯದಲ್ಲೇ ಆರನೇ ಸ್ಥಾನ: 2026-27ನೇ ಸಾಲಿಗೆ ಹಾವೇರಿ ಜಿಲ್ಲೆಯು ಹೆಚ್ಚು ಮಾನವ ದಿನಗಳ ಸೃಜನೆಯಲ್ಲಿ ರಾಜ್ಯದಲ್ಲಿಯೇ 6ನೇ ಸ್ಥಾನದಲ್ಲಿದ್ದು, ಗ್ರಾಮೀಣ ಭಾಗದ ಅಕುಶಲ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡುವಲ್ಲಿ ಯಶಸ್ವಿಯಾಗಿದೆ ಹಾಗೂ ಒಲಸೆ ಹೋಗದಂತೆ ಗ್ರಾಮಸ್ಥರಿಗೆ ಕೆಲಸ ನೀಡಲಾಗುವುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಅಥವಾ ಜಿಲ್ಲಾ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 