ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಸಮಾರಂಭ ಡಿ. 27 ರಂದು ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ
ಬೆಳಗಾವಿ 24 : ಬೆಳಗಾವಿಯಲ್ಲಿ ನಡೆಯುತ್ತಿರುವ 39ನೆಯ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮಾಚರಣೆ ದಿನದಿಂದ ದಿನಕ್ಕೆ ಮೆರಗು ಪಡೆಯುತ್ತಿದೆ. ಶತಮಾನೋತ್ಸವದ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ ಪಾಟೀಲರು ಇಂದು ಸಾಂಕೇತಿಕವಾಗಿ ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಸುವರ್ಣ ಸೌಧದ ಮುಂದೆ ಪ್ರತಿಷ್ಠಾಪಿಸಲಾಗಿರುವ ಮಹಾತ್ಮ ಗಾಂಧೀ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಲು ಆಹ್ವಾನ ನೀಡಿದರು.
ಇಂದು ಬೆಳಗ್ಗೆ ರಾಮತೀರ್ಥನಗರದಲ್ಲಿ ಇರುವ ಅಣ್ಣು ಗುರೂಜಿ ಅವರ ಮನೆಗೆ, ಹನುಮಾನ ನಗರದಲ್ಲಿರುವ ವಿಠ್ಠಲರಾವ್ ಯಾಳಗಿ ಹಾಗೂ 1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಶ್ರೀಗಂಗಾಧರರಾವ್ ದೇಶಪಾಂಡೆ ಅವರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಆಹ್ವಾನ ನೀಡಿದರು.
ಈ ಕುಟುಂಬದ ಸದಸ್ಯರಿಂದ ಸಚಿವ ಎಚ್.ಕೆ.ಪಾಟೀಲ ಅವರು ವಿವರವಾದ ಮಾಹಿತಿ ಪಡೆದುಕೊಂಡರು. ಅಶ್ಪೃಶತೆ ನಿವಾರಣೆಗೆ ಗಾಂಧಿಜಿ ಕರೆ ಕೊಟ್ಟ ಕಾಲಘಟ್ಟದಲ್ಲಿ ಬೆಳಗಾವಿ ಅಧಿವೇಶನ ನಡೆಯತ್ತಿತ್ತು. ನಮ್ಮ ಮನೆತನದವರು ಸ್ವಯಂ ಪ್ರೇರಿತರಾಗಿ ಭಂಗಿ ಬಳಿಯಲು ಮುಂದಾದರು. ಹೀಗಾಗಿ ಅವರು ಮುಂಚೂಣಿಯಲ್ಲಿ ಇರಲ್ಲಿಲ್ಲ ಇದನ್ನು ಈಗ ಊಹಿಸಿಕೊಳ್ಳವದೂ ಕಷ್ಟ ಎಂದು ಅಣ್ಣೂ ಗುರೂಜೀ ಅವರ ಮೊಮ್ಮಗ ಶ್ರೀ ಮಹೇಶ ದೇಶಪಾಂಡೆ ಹೇಳಿದರು.
ನಮ್ಮೂರು ಹಾಗೂ ಸುತ್ತ ಮುತ್ತಲಿನ ಊರುಗಳ ಜನರು ಗಾಂಧೀಜೀಯಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದರು ಎಂದು ನಮ್ಮಜ್ಜ ಹೇಳುತ್ತಿದ್ದರು. ನಾವೇಲ್ಲ ಅಜ್ಜನ ನೆರಳಿನಿಂದಲೇ ಬೆಳದವರು. ನಮ್ಮಜ್ಜ ತಲಾಠಿ ನೌಕರಿ ಬಿಟ್ಟು ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು. ನಾನು ಈ ಎಲ್ಲ ಮಾಹಿತಿ, ದಾಖಲೆ ಸಂಗ್ರಹಿಸಿರುವೆ ಎಂದರು.
ಇದು ಪುಸ್ತಕ ರೂಪದಲ್ಲಿ ಬರಬೇಕೆಂದು ಸಚಿವರು ದೇಶಪಾಂಡೆ ಅವರಿಗೆ ಸಲಹೆ ಮಾಡಿದರು. ಬೆಳಗಾವಿ ಅಧಿವೇಶನ ಕುರಿತು ಅಣ್ಣು ಗುರೂಜಿ ಬರೆದ ಕಿರು ಪುಸ್ತಕ ಮರು ಮುದ್ರಿಸಲು ಆದೇಶ ನೀಡಿದರು. ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಹಾಗೂ ಹೋರಾಡಿದ ಯೋಧರನ್ನು ಮರೆಯಬಾರದು. ನೈಜವಾಗಿ ದುಡಿದವರ ಸೇವೆ ಸ್ಮರಿಸಬೇಕು ಇದು ನಮ್ಮ ಕರ್ತವ್ಯ ಎಂದು ಸಚಿವ ಎಚ್.ಕೆ.ಪಾಟೀಲ ಅವರು ಹೇಳಿದರು.
ಒಂದೇ ಕುಟುಂಬ 16 ಜನರ ಜೈಲುವಾಸನಮ್ಮ ಮನೆಯಲ್ಲಿ 16 ಜನ ಜೈಲು ವಾಸ ಅನುಭವಿಸಿದ್ದಾರೆ. 13 ಜನ ಸ್ವಾತಂತ್ರ್ಯಕ್ಕಾಗಿ 3 ಜನ ಗೋವಾ ವಿಮೋಚನೆಗಾಗಿ ಹೋರಾಡಿದ್ದಾರೆ. ಗಾಂಧೀಜಿ ಜೋತೆ ನಮ್ಮ ತಂದೆ ನಿಕಟ ಸಂಪರ್ಕ ಹೊಂದಿದ್ದರು. ಚಿಕ್ಕಪ್ಪ ಬೆಳಗಾವಿಯಲ್ಲಿ ಅಧಿವೇಶನ ವಾಗಬೇಕೆಂದು ಬಯಸಿದ್ದರು ಆದರೆ 1923 ರಲ್ಲಿ ತೀರಿಕೊಂಡರು. ಲೋಕಮಾನ್ಯ ಟಿಳಕರಿಂದ ಸ್ಪೂರ್ತಿ ಪಡೆದಿದ್ದರು. ಗಾಂಧೀಜಿ ಬೆಳಗಾವಿಗೆ ಭೇಟಿ ಕೋಟ್ಟಾಗಲೆಲಾ ನಮ್ಮ ಮನೆತನ ಸೇವೆಸಲ್ಲಿಸಿದೆ ಎಂದು ವಿಠ್ಹಲರಾವ ಯಾಳಗಿ ಮೆಲಕು ಹಾಕಿದರು.
1942ರಲ್ಲಿ ನಾನು ನಮ್ಮ ತಂದೆ, ನಮ್ಮ ಕಾಕಾ ಎಲ್ಲರನ್ನೂ ಬಂಧಿಸಿ ಜೈಲಿಗೆ ಹಾಕಿದರು. ಬಾಂಬ್ ತಯಾರಿಸುವುದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದು, ಚಾವಡಿ ಸುಡುತ್ತಿದ್ದೆವು ಇದಕ್ಕಾಗಿ ನಮ್ಮನ್ನು ಜೈಲಿಗೆ ಹಾಕಿದರು.
1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಮಾಡಲು ಅಂದು ಗಂಗಾಧರಾವ ದೇಶಪಾಂಡೆ 72 ಸಾವಿರ ರೂ. ಸಂಗ್ರಹಿಸಿದರು. ಅಧಿವೇಶನಕ್ಕೆ ತಗಲುವ ಖರ್ಚನ್ನು ಭರಿಸಲು ಮುಂದಾದರು ಹುಬ್ಬಳಿಯಲ್ಲಿ ಜರುಗಿದ ಸಭೆಯಲ್ಲಿ ಈ ವಿಷಯವನ್ನು ಮತಕ್ಕೆ ಹಾಕಿದಾಗ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಹೆಚ್ಚು ಮತಗಳು ಬಂದವು ಹೀಗಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಯಿತು ಎಂದು ಶ್ರೀ ರವೀಂದ್ರ ದೇಶಪಾಂಡೆ (ಗಂಗಾಧರಾವ ದೇಶಪಾಂಡೆ ಅವರ ಮೊಮ್ಮಗ) ಹೇಳಿದರು.
ಸರ್ಕಾರ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾನಿಗಳನ್ನು ಸ್ಮರಿಸುತ್ತಿರುವುದು ನಮಗೆಲ್ಲಾ ಸಂತಸ ತಂದಿದೆ ಸರ್ಕಾರಕ್ಕೆ ಸ್ವಾತಂತ್ರ್ಯ ಯೋಧರ ಕುಂಟುಬದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದರು.
ಸ್ವಾತಂತ್ರ್ಯ ಯೋಧರ ಕುಟುಂಬದ ಸದಸ್ಯರು ಮಹಾತ್ಮಾ ಗಾಂಧಿಜಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಲು ಸರ್ಕಾರದ ಪರವಾಗಿ ಸಚಿವರು ಹೆಚ್. ಕೆ. ಪಾಟೀಲರು ಆಹ್ವಾನ ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ನೀಡಿದ ಭೇಟಿ ಬಗ್ಗೆ ಸಚಿವರು ಸಂತಸ ವ್ಯಕ್ತ ಪಡಿಸಿದರು. ಈ ಕುಟುಂಬದ ಸದಸ್ಯರ ಜೊತೆ ಕೆಲ ಕ್ಷಣಗಳನ್ನು ಕಳೆದಿರುವುದು ಸಂತೋಷದ ಹೆಮ್ಮೆಯ ನೆಮ್ಮದಿಯ ಭಾವ ಮೂಡಿಸಿತು ಎಂದು ತಮ್ಮನ್ನು ಬೇಟಿಯಾದ ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದರು.ಸುವರ್ಣ ಸೌಧಕ್ಕೆ ಭೇಟಿನಂತರ ಸಚಿವರಾದ ಎಚ್.ಕೆ.ಪಾಟೀಲರು ಸುವರ್ಣ ಸೌಧಕ್ಕೆ ತೆರಳಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣ ಸಿದ್ಧತೆಯನ್ನು ಪರಿಶಿಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮತ್ತಿತರು ಹಾಜರಿದ್ದರು.ಡಿ.26 ರಂದು ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ, ಹೊಸ ಫೋಟೋ ಗ್ಯಾಲರಿ ಲೋಕಾರೆ್ಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಬೆಳಗಾವಿ 24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ 1924 ರಲ್ಲಿ ಮಹತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವದ ಅಂಗವಾಗಿ ಬೆಳಗಾವಿ ನಗರದ ಟಿಳಕವಾಡಿಯಲ್ಲಿರುವ ವೀರಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ, ಹೊಸ ಫೋಟೋ ಗ್ಯಾಲರಿ ಲೋಕಾರೆ್ಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಡಿ.26 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ವೀರಸೌಧದ ಆವರಣದಲ್ಲಿನ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸುವವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಫೋಟೋ ಗ್ಯಾಲರಿ ಉದ್ಘಾಟಿಸುವವರು.ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ.ಬಿ.ಎಸ್, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವವರು. ಶಾಸಕರಾದ ಅಭಯ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ ಕಾಗೆ ಹಾಗೂ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸುವರು.
ಡಿ.26 ರಂದು ಗಂಗಾಧರ ರಾವ್ ದೇಶಪಾಂಡೆ ಸ್ಮಾರಕ ಭವನ ಹಾಗೂ ಫೋಟೋ ಗ್ಯಾಲರಿ ಉದ್ಘಾಟನಾ ಸಮಾರಂಭಬೆಳಗಾವಿ 24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿ.26 ರಂದು ಬೆಳಗ್ಗೆ 11.15 ಗಂಟೆಗೆ ಜಿಲ್ಲೆಯ ರಾಮತೀರ್ಥ ನಗರದಲ್ಲಿರುವ ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಭವನ ಮತ್ತು ಫೋಟೋ ಗ್ಯಾಲರಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತಿ ಸಿದ್ದರಾಮಯ್ಯ ಅವರು ಸ್ಮಾರಕ ಭವನದ ಉದ್ಘಾಟನೆ ಹಾಗೂ ಶ್ರೀ ಗಂಗಾಧರ ರಾವ್ ದೇಶಪಾಂಡೆ ಅವರ ಪುತ್ಥಳಿ ಅನಾವರಣಗೊಳಿಸುವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಫೋಟೋ ಗ್ಯಾಲರಿಯನ್ನು ಉದ್ಘಾಟಿಸುವರು. ಶಾಸಕರಾದ ಆಸೀಫ್ (ರಾಜು) ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ. ಪಾಟೀಲ, ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಸರಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ ಕಾಗೆ ಹಾಗೂ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸುವರು.
ಡಿ.25 ರಂದು ಟಿಟಕವಾಡಿಯ ರೈಲ್ವೆ 2ನೇ ಗೇಟ್ ತಾತ್ಕಾಲಿಕವಾಗಿ ಬಂದ್‌ಬೆಳಗಾವಿ 24 : ಬೆಳಗಾವಿ ನಗರಕ್ಕೆ ಮಾರ್ಗ ಕಲ್ಪಿಸುವ ಟಿಳಕವಾಡಿಯ ರೈಲ್ವೆ 2ನೇ ಗೇಟ್ ಮಾರ್ಗದ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಡಿ.25 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರಿಗೆ ರೈಲ್ವೆ 2ನೇ ಗೇಟ್ ಟಿಳಕವಾಡಿ ಮಾರ್ಗವನ್ನು ತಾತ್ಕಾಲಿಕವಾಗಿ ಬಂದ ಮಾಡಲಲಾಗಿದೆ ಎಂದು ಜೂನಿಯರ್ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಸೇರಿ ವಿವಿಧ ಕೋರ್ಸ್‌ಗಳ ಪ್ರವೇಶ ಪ್ರಾರಂಭಬೆಳಗಾವಿ 24 : 2025ನೇ ಸಾಲಿಗೆ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇನ್ನೋ) ದೂರ ಶಿಕ್ಷಣದ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದೆ.
ಇನ್ನೂ ಇದು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಒಂದು ಕೇಂದ್ರೀಯ ವಿಶ್ವವಿದ್ಯಾಲಯವಾಗಿದ್ದು, ಇತ್ತೀಚಿಗೆ ಬೆಂಗಳೂರಿನ ನ್ಯಾಕ ಸಂಸ್ಥೆಯಿಂದ ಂ++ ಮಾನಂಕನವನ್ನು ಪಡೆದಿದೆ. ಆಸಕ್ತಿಯುಳ್ಳವರು ಬೆಳಗಾವಿಯ ಆರ್.ಪಿ.ಡಿ. ಮಹಾವಿದ್ಯಾಲಯಲ್ಲಿ ಸ್ಥಿತ ಇಗೋ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಲು ಕೇಂದ್ರದ ಸಂಯೋಜಕರಾದ ಡಾ.ಪ್ರಸನ್ನ ಜೋಶಿಯವರು ತಿಳಿಸಿದ್ದಾರೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಜೊತೆಗೆ ಎಂ.ಕಾಮ್, ಎಮ್.ಬಿ.ಎ, ಎಮ್.ಸಿ.ಎ. ಬಿ.ಸಿ.ಎ.ಎಮ್.ಎ ಹೀಗೆ ಸುಮಾರು 50 ಕ್ಕೂ ಹೆಚ್ಚು ವಿವಿದ ಸ್ನಾತಕ, ಸ್ನಾತಕೋತ್ತರ, ಡಿಪ್ಲೋಮಾ ಹಾಗು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಕೋರ್ಸುಗಳ ಪ್ರವೇಶಕ್ಕಾಗಿ ಅತ್ಯಂತ ರಿಯಾಯತಿ ಹಾಗು ಅಗ್ಗ ದರದಲ್ಲಿ ಪ್ರವೇಶ ಪಡಿಯಬಹುದು. ಅನೇಕ ಕೋರ್ಸುಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿವೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ:0831-2485997, 8904731950, 9449692186, 9742006896 ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಸಂಜೆ 5.00 ರಿಂದ 8.00 ಘಂಟೆವರೆಗೆ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.