ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಾವೀರ ಜಯಂತಿ ಆಚರಣೆ
Mahavir Jayanti celebration at Vidyavardhaka English Medium School
ಅಥಣಿ 31: ಪಟ್ಟಣದ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ಸಡಗರದಿಂದ ದಿ. 30ರಂದು ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಭಗವಾನ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (ಃಇಓ) ಮಲ್ಲಪ್ಪ ಮುಂಜೆ ಅವರು ಮಾತನಾಡಿ, "ಭಗವಾನ್ ಮಹಾವೀರರ ಅಹಿಂಸೆ ಮತ್ತು ಸತ್ಯದ ಬೋಧನೆಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಅವರ ಬುದ್ಧಿವಂತಿಕೆಯ ಮಾರ್ಗವು ನಮಗೆ ಸಾರ್ಥಕ ಜೀವನ ನಡೆಸಲು ಪ್ರೇರಣೆಯಾಗಲಿ," ಎಂದು ಹಾರೈಸಿದರು.ಮತ್ತೊಬ್ಬ ಅತಿಥಿಗಳಾದ ಉಪ ತಹಶೀಲ್ದಾರ್ ಜಿ. ಎಸ್. ರೋಡಗಿ ಅವರು ಮಾತನಾಡಿ, ಮಹಾವೀರರ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಿ.ಆರಿ್ಪ ಗಂಗಾಧರ ಕೋಷ್ಠಿ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಶಾಲೆಯ ಆಡಳಿತಾಧಿಕಾರಿಗಳಾದ ಮಹಾದೇವ ಧರಿಗೌಡರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಆಂಗ್ಲ ಮಾಧ್ಯಮ ಶಾಲೆಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಾಲೆಯ ವತಿಯಿಂದ ಎಲ್ಲರಿಗೂ ಮಹಾವೀರ ಜಯಂತಿಯ ಶುಭಾಶಯಗಳನ್ನು ಕೋರಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 