ಬೆಂಗಳೂರು, ಏ.25, ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದು:ಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, ಮಿತ್ರ, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ನಿಧನದ ಸುದ್ದಿ ಕೇಳಿ ಅಪಾರವಾದ ದುಃಖವುಂಟಾಗಿದೆ. ರಾಜ್ಯದಲ್ಲಿ ಭಜರಂಗದಳವನ್ನು ತಳಮಟ್ಟದಿಂದ ಕಟ್ಟಿಬೆಳೆಸುವಲ್ಲಿ ಅವರ ಶ್ರಮ ಬಹಳ ದೊಡ್ಡದು. ಮಹೇಂದ್ರ ಕುಮಾರ್ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.