ಮಹೇಂದ್ರ ಕುಮಾರ್‌ ನಿಧನ: ಯಡಿಯೂರಪ್ಪ ಸಂತಾಪ

ಬೆಂಗಳೂರು,  ಏ‌. 25,ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಅವರು ಹೃದಯಾಘಾತವಾಗಿ  ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಹೇಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.ಪ್ರಗತಿಪರ  ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ  ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು  ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು  ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದ್ದಾರೆ.