ಉಡುಪಿಯ ಶಾಲಾ ಪ್ರಾಂಶುಪಾಲ ಧರ್ಮಗುರು ವಂದನೀಯ ಮಹೇಶ್ ಡಿಸೋಜಾ ಆತ್ಮಹತ್ಯೆ

ಉಡುಪಿ ಅ 12:    ಉಡುಪಿ ಜಿಲ್ಲೆಯ ಶಿರ್ವದಲ್ಲಿರುವ ಡಾನ್ ಬಾಸ್ಕೊ ಶಾಲೆಯ ಪ್ರಾಂಶುಪಾಲರಾದ ವಂದನೀಯ ಮಹೇಶ್ ಡಿಸೋಜಾ (36) ಅವರು ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ರಾತ್ರಿ ಶಾಲೆಯ ಕ್ಯಾಬಿನ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಹೆಚ್ಚಿನ ವಿವರ ತಿಳಿದುಬಂದಿಲ್ಲ. ಮೂಲತಃ ಮೂಡುಬೆಳ್ಳೆಯವರಾಗಿದ್ದ ಅವರು ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇವರು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಉದಯವಾದ ಬಳಿಕ ಪ್ರಥಮ ಧರ್ಮಗುರುವಾಗಿ 2013ರಲ್ಲಿ ದೀಕ್ಷೆ ಪಡೆದಿದ್ದರು. ಘಟನಾ ಸ್ಥಳಕ್ಕೆ ಮಧ್ಯರಾತ್ರಿಯೇ ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.