ಮೈಲಾರ ಮಹಾದೇವಪ್ಪನವರ ರಾಷ್ಟ್ರೇ್ರಮ ನಮ್ಮೆಲರಿಗೂ ಆದರ್ಶ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
Mailara Mahadevappa's nationalism is an ideal for all of us. Deputy Commissioner Dr. Vijayamahantesh
ಲೋಕದರ್ಶನ ವರದಿ
ಹಾವೇರಿ 01 : ಕರ್ನಾಟಕದ ಭಗತ್ ಸಿಂಗ್ ಎಂದು ಕರೆಸಿಕೊಳ್ಳುವ ಹುತಾತ್ಮ ಮೈಲಾರ ಮಹಾದೇವಪ್ಪ ಅವರ ದೇಶಪ್ರೇಮ, ತ್ಯಾಗ ಮತ್ತು ಬಲಿದಾನ ನಮ್ಮೆಲ್ಲರಿಗೂ ಆದರ್ಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ಹುತಾತ್ಮರ ವೀರಸೌಧದಲ್ಲಿ ಬುಧವಾರ ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಮೊಟೇಬೆನ್ನೂರು ಬಳ್ಳಾರಿ ರುದ್ರ್ಪ ಬಿ.ಎಡ್. ಕಾಲೇಜು ಹಾಗೂ ಟಿ.ಎಂ.ಎ.ಇ.ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾದ ಹುತಾತ್ಮ ಮೈಲಾರ ಮಹಾದೇವಪ್ಪ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಅವರುಗಳು ಸ್ವಾತಂತ್ರ್ಯ ಸಂಗ್ರಾಮದಲ್ಲಿ 1-4-1943 ರಂದು ಜೀವಬಲಿದಾನ ಮಾಡಿದ ಸ್ಮರಣಾರ್ಥ 83ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ 1857ರಲ್ಲಿ ನಡೆದ ಸಿಪಾಯಿದಂಗೆ ದೇಶದ ಮೊದಲ ಸ್ವಾತಂತ್ರ್ಯ ಸಮರವಾಗಿದ್ದು, ಇದರಲ್ಲಿ ಅನೇಕ ಮಹಾನ್ ನಾಯಕರುಗಳು ತಮ್ಮ ಪ್ರಾಣ ತ್ಯಾಗ ಮಾಡಿದರು. ನಂತರದ ದಿನಗಳಲ್ಲಿ ನಡೆದ ಸ್ವಾತಂತ್ರ್ಯ ಚಳುವಳಿಯಲ್ಲಿ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅದೇ ರೀತಿ ಸ್ವಾತಂತ್ರ್ಯ ಹೋರಾಟದಲ್ಲಿ ಹಾವೇರಿ ಜಿಲ್ಲೆ ಸಹ ಮುಂಚೂಣಿಯಲ್ಲಿತ್ತು. ಈ ಚಳುವಳಿಯಲ್ಲಿ ಮೈಲಾರ ಮಹಾದೇವಪ್ಪ, ವೀರಯ್ಯ ಹಿರೇಮಠ ಮತ್ತು ತಿರಕಪ್ಪ ಮಡಿವಾಳ ಅವರ ಹೆಸರುಗಳು ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿವೆ ಎಂದರು.
ಮೈಲಾರ ಮಹಾದೇವಪ್ಪ ಅವರು ಬಹಳ ಸಾತ್ವಿಕ ವ್ಯಕ್ತಿಯಾಗಿದ್ದರು. ಹತ್ತುವರ್ಷದ ಬಾಲಕನಾಗಿದ್ದಾಗಲೇ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು. ಅವರು ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಸಿ ಹೋರಾಟ ನಡೆಸಿದವರು. 43ನೇ ವಯಸ್ಸಿನಲ್ಲಿ ಬ್ರಿಟಿಷರ ಗುಂಡಿಗೆ ಬಲಿಯಾದ ಅವರು ದೇಶಪ್ರೇಮದ ಪ್ರತೀಕವಾಗಿದ್ದಾರೆ ಎಂದು ಬಣ್ಣಿಸಿದರು.
ಮಹಾತ್ಮಾ ಗಾಂಧೀಜಿಯವರು 1930ರಲ್ಲಿ ಹಮ್ಮಿಕೊಂಡಿದ್ದ ಐತಿಹಾಸಿಕ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ 78 ಜನರಲ್ಲಿ ಕರ್ನಾಟಕದಿಂದ ಏಕೈಕ ಪ್ರತಿನಿಧಿ ಮೈಲಾರ ಮಹದೇವಪ್ಪನವರು. ಸಾಬರಮತಿ ಆಶ್ರಮದಲ್ಲಿ ತರಬೇತಿ ಪಡೆದು ಹಾವೇರಿ ಜಿಲ್ಲೆಯ ಹೊಸರಿತ್ತಿ ಹಾಗೂ ಕೊರಡೂರನ್ನು ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು ಅವರು ಹೋರಾಟ ನಡಿಸಿದ್ದರು. 1941ರಲ್ಲಿ ಸೆರೆಮನೆ ವಾಸ ಅನುಭವಿಸಿದ್ದರೂ ಹಾಗೂ ಮರಳಿ ಬಂದು ಬ್ರಿಟಿಷರ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ ಧೀಮಂತ ವೈಕ್ತಿತ್ವ ಅವರದು ಎಂದು ಹೇಳಿದರು.
ಮೈಲಾರರ ಹೆಸರಿನಲ್ಲಿ ಸ್ಥಾಪಿತವಾಗಿರುವ ಟ್ರಸ್ಟ್ ಮೂಲಕ ಅನೇಕ ಪುಸ್ತಕಗಳು ಪ್ರಕಟವಾಗಿವೆ. ವೀರಸೌಧದ ಆವರಣದಲ್ಲಿ ಮೈಲಾರರ ಜೀವನ ಚಿತ್ರಣ ನೀಡುವ ಸುಸಜ್ಜಿತ ಸಂಗ್ರಹಾಲಯ ನಿರ್ಮಿಸುವ ಚಿಂತನೆ ಇದೆ. ಕೊರಡೂರು ಸೇವಾಶ್ರಮವನ್ನು ನವೀಕರಿಸಲಾಗಿದ್ದು, ಈ ಬಾರಿ ಜೂನ್ 8ರಂದು ಅವರ ಜನ್ಮದಿನವನ್ನು ಸಡಗರದಿಂದ ಆಚರಿಸಲಾಗುವುದು ಎಂದು ಹೇಳಿದರು.
ಇಂದಿನ ಯುವಪೀಳಿಗೆ ಆಧುನೀಕರಣ ಮತ್ತು ಪಾಶ್ಚ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗದೇ ಇಂತಹ ಮಹಾನ್ ನಾಯಕ ಜೀವನ ಚರಿತ್ರೆ ಓದಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಯುವಕರಿಗೆ ಪರಿಚಯಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರವಹಿಸಿ ಬ್ರಿಟಿಷರ ಆಡಳಿತದ ವಿರುದ್ಧ ಧೈರ್ಯವಾಗಿ ಹೋರಾಡಿದ ಮಹಾನ್ ವ್ಯಕ್ತಿ ಮೈಲಾರ ಮಹಾದೇವಪ್ಪನವರು. ಅವರ ತ್ಯಾಗ, ಧೈರ್ಯ ಮತ್ತು ದೇಶಭಕ್ತಿ ಯುವಪೀಳಿಗೆಗೆ ಆದರ್ಶವಾಗಬೇಕು. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಹರಿಹರದ ಹಿರಿಯ ಸಾಹಿತಿ ಪ್ರೊ. ಲಿಂಗರಾಜ ಕಮ್ಮಾರ ಅವರು ಮೈಲಾರ ಮಹಾದೇವಪ್ಪನವರ ತ್ಯಾಗ, ಧೈರ್ಯ ಮತ್ತು ಸಾಧನೆಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಂ.ಎಂ. ಮೈದೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಹಿರೇಮಠ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಶ್ರೀಮತಿ ಪರಿಮಳಾ ಜೈನ್, ಸಾಹಿತಿ ಸತೀಶ ಕುಲಕರ್ಣಿ, ಎಚ್.ಎಸ್.ಮಹಾದೇವ, ವಿ.ಎನ್.ತಿಪ್ಪನಗೌಡ, ನಾಗೇಂದ್ರ ಕಟಕೋಳ, ಟಿ.ಎಂ.ಎ.ಇ.ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಕೆ. ಪ್ರಸಾದಿಮಠ, ಬಳ್ಳಾರಿ ರುದ್ರ್ಪ ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಸುರೇಶ್ ಎಂ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 