ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಲಾಕ್ಡೌನ್ ಪಾಲಿಸಿ: ಕೃಷಿ ಸಚಿವ ಬಿ.ಸಿ.ಪಾಟೀಲ
ಲೋಕದರ್ಶನವರದಿ
ಹಾವೇರಿ,ಏ.17: ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡಾ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕರಾಗಿರುವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಉಚಿತ ಮಾಸ್ಕ್ ಗಳನ್ನು ವಿತರಿಸಲಾಯಿತು.
ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಆಶಾಕಾರ್ಯಕತರ್ೆಯರು ಕೊರೊನಾ ವಾರಿಯಸರ್್ನಂತೆ ದುಡಿಯುತ್ತಿದ್ದು, ಮನೆಮನೆಗೆ ಹೋಗಿ ಜನರ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.ವಿವರ ಕೇಳಲು ಬರುವ ಆಶಾಕಾರ್ಯಕತರ್ೆಯರಿಗೆ ಪ್ರತಿಯೊಬ್ಬರು ಸಹಕರಿಸಬೇಕು.
ಗ್ರಾಮಪಂಚಾಯಿತಿ ಕಡೆಯಿಂದ ಆಶಾಕಾರ್ಯಕತರ್ೆಯರಿಗೆ ಥಮರ್ೊಮೀಟರ್ ಒದಗಿಸಿದಲ್ಲಿ ಜನರ ಆರೋಗ್ಯ ತಪಾಸಣೆಗೆ ಸಹಕಾರವಾಗಲಿದೆ ಎಂದರು.
ಜನರು ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು.ಲಾಕ್ಡೌನ್ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸಕರ್ಾರಗಳ ನಿಯಮಗಳನ್ನು ಉಲ್ಲಂಘಿಸಬಾರದು.ಯಾರಿಗಾದರೂ ಅನಾರೋಗ್ಯದ ಲಕ್ಷಣ ಕಂಡುಬಂದಲ್ಲಿ ಅದನ್ನು ತಕ್ಷಣವೇ ತಾಲೂಕು ವೈದ್ಯಾಧಿಕಾರಿ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತರಬೇಕು ಎಂದು ಸಚಿವರು ಸಲಹೆ ನೀಡಿದರು.
ಬಳಿಕ ಹಿರೇಕೆರೂರಿನ ವ್ಯವಸಾಯೋತ್ಪನ್ನ ಸಹಕಾರಿ ಮಾರಾಟ ಸಂಘ(ಲಿ) ಇಲ್ಲಿಗೆ ಭೇಟಿ ನೀಡಿದ ಸಚಿವರು, ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯವಾದ ಗೊಬ್ಬರ,ಬೀಜದ ದಾಸ್ತಾನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾ ಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್,ಎಸ್.ಎಸ್.ಪಾಟೀಲ್,ರವಿಶಂಕರ್ ಬಾಳಿಕಾಯಿ,ಪಿಎಸ್ಐ ಸಿಪಿಐ ತಹಶೀಲ್ದಾರ್ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 