ಮನೆಯಲ್ಲಿಯೇ ತಯಾರಿಸಿದ ತಾಜಾ, ಶುದ್ಧ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ: ಪ್ರಾಚಾರ್ಯೆ ಸುಷ್ಮಾದೇವಿ ಒಡೆಯರ್
Maintain good health by consuming fresh, pure, homemade food: Principal Sushmadevi Wodeyar
ಲೋಕದರ್ಶನ ವರದಿ
ಮುಧೋಳ 28 : ಮುಧೋಳದ ಎಸ್.ಆರ್.ಕಂಠಿ ಕಾಲೇಜಿನಲ್ಲಿ 2026ಹಿ27 ಶೈಕ್ಷಣಿಕ ಸಾಲಿನ ವಿದ್ಯಾರ್ಥಿನಿಯರ ಒಕ್ಕೂಟ ಹಾಗೂ ಮಹಿಳಾ ಸಬಲೀಕರಣ ಕೋಶದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯೆ ಸುಷ್ಮಾದೇವಿ ಒಡೆಯರ್, ಮನೆಯಲ್ಲಿಯೇ ತಯಾರಿಸಿದ ತಾಜಾ ಹಾಗೂ ಶುದ್ಧ ಆಹಾರ ಸೇವಿಸುವುದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಮನೆಯ ಅಡುಗೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಸೋಂಕುಗಳನ್ನು ತಡೆಯಬಹುದು. ಕಡಿಮೆ ಎಣ್ಣೆ, ಮಸಾಲೆ ಹಾಗೂ ಅಗತ್ಯ ಪ್ರಮಾಣದ ಪೌಷ್ಟಿಕಾಂಶಗಳನ್ನು ಬಳಸಿ ತಯಾರಿಸುವ ಆಹಾರ ಆರೋಗ್ಯಕರವಾಗಿದ್ದು, ಜಂಕ್ ಫುಡ್ ಸೇವನೆ ಕಡಿಮೆ ಮಾಡುವುದರಿಂದ ದೇಹದ ತೂಕ ನಿಯಂತ್ರಣದಲ್ಲಿರುತ್ತದೆ ಎಂದರು. ತಾಜಾ ತರಕಾರಿ ಮತ್ತು ಧಾನ್ಯಗಳಿಂದ ತಯಾರಿಸಿದ ಆಹಾರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿನಿಯರ ಒಕ್ಕೂಟದ ಮೂಲಕ ನಾಯಕತ್ವ, ಸಂಘಟನಾ ಸಾಮರ್ಥ್ಯ ಹಾಗೂ ಸಾರ್ವಜನಿಕವಾಗಿ ಮಾತನಾಡುವ ಕೌಶಲ ಬೆಳೆಸಿಕೊಳ್ಳಲು ಅವಕಾಶ ದೊರೆಯುತ್ತದೆ.
ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಶೈಕ್ಷಣಿಕ, ವೈಯಕ್ತಿಕ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಡಳಿತ ಮಂಡಳಿಯ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದು ಎಂದರು. ಮಹಿಳಾ ಸಬಲೀಕರಣವು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ನೀಡುತ್ತದೆ. ವಿದ್ಯಾರ್ಥಿನಿಯರು ಆತ್ಮವಿಶ್ವಾಸ, ದೃಢನಿರ್ಧಾರ, ಹೊಣೆಗಾರಿಕೆ ಹಾಗೂ ಸೃಜನಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ. ಮಲ್ಲಿಕಾರ್ಜುನ ಜರಕುಂಟಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದು, ವಿದ್ಯಾರ್ಥಿನಿಯರು ಅವರಂತೆ ಸಾಧನೆ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಅಜ್ಜಪ್ಪ ಕಡುರ್, ವಿದ್ಯಾರ್ಥಿನಿಯರ ಪ್ರತಿನಿಧಿ ಉಷಾ ಬೆಳಗಲಿ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 