ಹಬ್ಬದ ಸಂಭ್ರಮದೊಂದಿಗೆ ಶಾಂತಿ ಕಾಪಾಡಿ: ಎಸ್ಪಿ ಯಶೋಧಾ
Maintain peace amidst festive celebrations: SP Yashodha
ರಾಣೆಬೆನ್ನೂರು, ಆ.18: ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಭಾವೈಕ್ಯತೆಯಿಂದ ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಒಂಟಗೋಡಿ ಕರೆ ನೀಡಿದರು.
ನಗರ ಠಾಣೆ ಪೊಲೀಸ್ ಭವನದಲ್ಲಿ ನಡೆದ ಈದ್ ಮಿಲಾದ್ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ಜಗಳಗಳಿಗೆ ಕೋಮು ಬಣ್ಣ ನೀಡಬಾರದು. ಯುವಕರು ಹಿರಿಯರ ಸಲಹೆ ಪಾಲಿಸಿ ನಗರದಲ್ಲಿ ಶಾಂತಿ ಕಾಪಾಡಬೇಕು ಎಂದರು.
ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ನಿಗದಿತ ಮಾರ್ಗದಲ್ಲೇ ಸಾಗಬೇಕು. ಬ್ಯಾನರ್, ಬಂಟಿಂಗ್ ಅಳವಡಿಸಲು ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದರು. ಕಾನೂನು ಉಲ್ಲಂಘಿಸಿ ಶಾಂತಿಭಂಗಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಡಿವೈಎಸ್ಪಿ ಲೋಕೇಶ್, ಅಂಜುಮನ್ ಇಸ್ಲಾಂ ಸಮಿತಿ ಅಧ್ಯಕ್ಷ ಎಚ್.ಕೆ. ಬಿದರಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಹಾಗೂ ನೂರಾರು ನಾಗರಿಕರು ಸಭೆಯಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 