ಕಾರ್ಮಿಕರ ಘನತೆಯನ್ನು ಕಾಪಾಡಿ; ಕೇಂದ್ರಕ್ಕೆ ರಾಹುಲ್ ಮನವಿ

ನವದೆಹಲಿ, ಮಾ 28, ಕೊರೋನಾ ವೈರಸ್ ತಡೆಯಲು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಣೆಯಿಂದ ಬೃಹತ್ ಸಂಖ್ಯೆ ಕಾರ್ಮಿಕರುತ ತಮ್ಮ ತವರೂರಿಗೆ ತೆರಳಲಾಗದೆ ಪರದಾಡುವಂತಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಹೀನಾಯ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ಕಾರಣ. ಇದು ನಮ್ಮ ಪ್ರಜೆಗಳಿಗೆ ಮಾಡಿರುವ ಬಹುದೊಡ್ಡ ಅಪರಾಧ ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಅವರು ದೆಹಲಿ ಮತ್ತು ಉತ್ತರಪ್ರದೇಶದ ಗಡಿಯಲ್ಲಿ ಸಿಲುಕಿರುವ ಹಲವು ವಲಸಿಗ ಕಾರ್ಮಿಕರ ಭಾವಚಿತ್ರವನ್ನು ಹಂಚಿಕೊಂಡಿದ್ದಾರೆ. ಇಂದು ಸಂಕಷ್ಟದ ಸಂದರ್ಭದಲ್ಲಿ ನಮ್ಮ ಸಹೋದರ, ಸಹೋದರಿಯರಿಗೆ ಕನಿಷ್ಠ ಮರ್ಯಾದೆ  ಹಾಗೂ ಬೆಂಬಲ ನೀಡಬೇಕು. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇದೇ ದೊಡ್ಡ ಸಮಸ್ಯೆಯಾಗಲಿದೆ ಎಂದಿದ್ದಾರೆ. ಇದಕ್ಕೂ ಮುನ್ನ ರಾಹುಲ್ ಗಾಂಧಿ, ವಲಸಿಗರ ಕಾರ್ಮಿಕರಿಗೆ ನೆರವು ಒದಗಿಸುವಂತೆ ಉತ್ತರಪ್ರದೇಶ ಮತ್ತು ಬಿಹಾರ ಸರ್ಕಾರಕ್ಕೆ ಮನವಿ ಮಾಡಿದ್ದರು.