ಹದಿಹರೆಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಿ: ಜ್ಯೋತಿ

 ಗುಳೇದಗುಡ್ಡ18: ಹದಿಹರೆಯದ ವಯಸ್ಸಿನಲ್ಲಿ ಹೆಣ್ಣು ಮಕ್ಕಳಿಗೆ ಸಾಕಷ್ಟು ದೈಹಿಕ ಹಾಗೂ ಮಾನಸಿಕ ಬದಲಾವಣೆಗಳಾಗುತ್ತವೆ. ಅವುಗಳ ಬಗೆಗೆ ತಿಳಿದುಕೊಂಡು ವಿದ್ಯಾಥರ್ಿನಿಯರು ತಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಬೇಕೆಂದು ಪಟ್ಟಣದ  ಸಕರ್ಾರಿ ಆಸ್ಪತ್ರೆಯ ಐಸಿಟಿಸಿ ಘಟಕದ ಆಪ್ತ ಸಮಾಲೋಚಕಿ ಜ್ಯೋತಿ ಮೆನಸಿನಕಾಯಿ ಹೇಳಿದರು.

    ಮಂಗಳವಾರ ಅವರು ಸ್ಥಳಿಯ ಪಿಇ ಟ್ರಸ್ಟಿನ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹದಿಹರೆಯದವರ ಆರೋಗ್ಯ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಪ್ರೌಢ ಶಾಲೆಯ ವಿದ್ಯಾಥರ್ಿನಿಯರಿಗೆ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಹದಿಹರೆಯದ ವಯಸ್ಸಿನಲ್ಲಿ ಉಂಟಾಗುವ ದೈಹಿಕ, ಮಾನಸಿಕ, ಬೆಳವಣಿಗೆಯಿಂದ ಗೊಂದಲಕ್ಕೊಳಗಾಗದೇ  ವೈಯಕ್ತಿಕ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ ಹಾಗೂ ಯೋಗದಿಂದ ದೈಹಿಕ ಹಾಗೂ ಮಾನಸಿಕವಾಗಿ ಸಧೃಡವಾಗಬೇಕೆಂದು ಹೇಳಿ,  ರಕ್ತ ಹೀನತೆಯಿಂದ  ಕಾಡುವ ಹೊಟ್ಟೆ ನೋವು, ಕಾಮಾಲೆ, ಅಲ್ಲದೇ ಎಚ್ಐವಿ,  ಏಡ್ಸದಂತಹ  ಮಾರಕ ರೋಗಗಳ ಬಗ್ಗೆ ಸಮಗ್ರವಾಗಿ ತಿಳಿಸಿದರು. ವಿದ್ಯಾಥರ್ಿನಿಯರ ವೈಯಕ್ತಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರು ಹಾಜರಿದ್ದರು.