ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲ್ಲಿಸಿ: ಕೃಷ್ಣಗೌಡ ಪಾಟೀಲ
Make Congress win for development: Krishnagowda Patil
ಬಾಗಲಕೋಟ 02 : 2023ರಿಂದ ಇಲ್ಲಿಯವರೆಗೆ (ಕಾಂಗ್ರೆಸ್ ಸರ್ಕಾರದಲ್ಲಿ) ಬಾಗಲಕೋಟ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಹೀಗಾಗಿ ಮತದಾರರು ಬಾಗಲಕೋಟ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವಂತೆ ಯುವ ಕಾಂಗ್ರೆಸ್ ಸಮಿತಿ ಗದಗ ಜಿಲ್ಲಾಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಮನವಿ ಮಾಡಿದರು.ಬಾಗಲಕೋಟ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಪರವಾಗಿ ಶಿರೂರ ಗ್ರಾಮದಲ್ಲಿ ಮತಯಾಚಣೆ ಮಾಡಿ ಅವರು ಮಾತನಾಡಿದರು.
ಬಾಗಲಕೋಟ ಜಿಲ್ಲೆಯ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ 425 ಕೋಟಿ ರೂ. ಅನುದಾನ (150 ಎಂಬಿಬಿಎಸ್ ಸೀಟ್), ಬಾದಾಮಿ ತಾಲೂಕು ಕುಳಗೇರಿ ಕ್ರಾಸ್ ಬಳಿ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಸ್ಥಾಪನೆಗೆ ಅನುದಾನ, ಯುಕೆಪಿ ಹಂತ-3 ಕಾಮಗಾರಿ ಮತ್ತು ರೈತರ ಪರಿಹಾರಕ್ಕೆ 2026 ಬಜೆಟ್ನಲ್ಲಿ 3,000 ಕೋಟಿ ರೂ. ಮೀಸಲು ಇಡಲಾಗಿದೆ.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸ್ಥಾಪನೆಗೆ ಅನುಮೋದನೆ, ಜಿಲ್ಲಾ ಆಸ್ಪತ್ರೆಯಲ್ಲಿ ಋಊಐ ಪ್ರಯೋಗಾಲಯ ಮತ್ತು ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳ ಸ್ಥಾಪನೆ, ಕೆರೂರು ಏತ ನೀರಾವರಿ ಯೋಜನೆಗೆ ಆದ್ಯತೆ ನೀಡಿದೆ.
ಮೆಳ್ಳಿಗೇರಿ-ಹಳಗಲಿ, ಸಾಸಲಟ್ಟಿ-ಶಿವಲಿಂಗೇಶ್ವರ-ಶಿರೂರು ಮತ್ತು ಹಣವಾಲ ಏತ ನೀರಾವರಿ ಯೋಜನೆಗಳಿಗೆ ಬಜೆಟ್ ಅನುದಾನ ಸಹ ನೀಡಲಾಗಿದೆ. ವಿಜ್ಞಾನ ಕೇಂದ್ರ ಮತ್ತು ತಾರಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ. ಅಒಋಕ ಅಡಿಯಲ್ಲಿ 25 ಕೋಟಿ ರೂ. ವಿಶೇಷ ಅನುದಾನ (ರಸ್ತೆ, ಚರಂಡಿ, ನಾಗರಿಕ ಸೌಲಭ್ಯಗಳಿಗೆ), ಸಹಕಾರಿ ಬ್ಯಾಂಕುಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ದಾಖಲೆ ಪ್ರಮಾಣದ ರೈತರಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂದು ಹೇಳಿದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 