ಮೋದಿ ಹುಟ್ಟುಹಬ್ಬದ ಕಾರ್ಯಕ್ರಮ ಯಶಸ್ವಿಗೊಳಿಸಿ: ಶಾಸಕ ಐಹೊಳೆ

ಮೋದಿ ಹುಟ್ಟುಹಬ್ಬದ ಕಾರ್ಯಕ್ರಮ ಯಶಸ್ವಿಗೊಳಿಸಿ: ಶಾಸಕ ಐಹೊಳೆ  Make Modi's birthday event a success: MLA Aihole

ರಾಯಬಾಗ 03: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆ. 17ರಿಂದ ಒಂದು ತಿಂಗಳ ಕಾಲ ದೇಶಾದ್ಯಂತ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು. ಗುರುವಾರ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಬಿಜೆಪಿ ರಾಯಬಾಗ ಮಂಡಲದ ವತಿಯಿಂದ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ 25 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ‘ಸೇವಾ ಸಂಕಲ್ಪ’ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿಯನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು. ಎಸ್‌ಐಆರ್ ಮತದಾರರ ತೀವ್ರ ಪರಿಷ್ಕರಣೆಯ ಎರಡನೇ ಹಂತ ಆರಂಭವಾಗಿದ್ದು, ಅರ್ಹ ಮತದಾರರ ಹೆಸರುಗಳನ್ನು ಖಚಿತಪಡಿಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಇದು ಉತ್ತಮ ಅವಕಾಶವಾಗಿದೆ ಎಂದರು.