ಗದಗ : ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಿರುವ ರೀತಿಯಲ್ಲೇ ಗದಗನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸುವಲ್ಲಿ ವಿವಿಧ ಇಲಾಖೆಯವರು, ಸಂಘಟನೆಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಶ್ರಮಿಸಿ ಪರಿಸರ ಸಂರಕ್ಷಣೆಗೆ ಹಾಗೂ ಸ್ವಚ್ಛತೆಗೆ ಮುಂದಾಗಬೇಕು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ನುಡಿದರು.
ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿಂದು ಮಹಾತ್ಮಾ ಗಾಂಧೀಜಿ ಜನ್ಮದಿನಾಚರಣೆ ಅಂಗವಾಗಿ ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ನಗರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಹಮ್ಮಿಕೊಂಡಿದ್ದ ಜಾಥಾ ಹಾಗೂ ಶ್ರಮದಾನ ಕಾರ್ಯಕ್ರಮದಲ್ಲಿ ಅವರು ಪರಿಸರ ರಕ್ಷಣೆ ಕುರಿತಂತೆ ಸಸಿಗೆ ನೀರುಣಿಸುವ ಮೂಲಕ ಹಾಗೂ ಪ್ಲಾಸ್ಟಿಕ್ನ್ನು ಶೇಖರಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಸ್ವತಃ ಜೋಳಿಗೆಯನ್ನು ಹಾಕಿಕೊಂಡು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭೆಯ ಪರಿಸರ ಇಂಜನೀಯರ್ ಗಿರೀಶ ತಳವಾರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾದಿಕಾರಿ ಪಿ.ಎಸ್. ಮಂಜುನಾಥ, ಗದಗ ತಹಶೀಲ್ದಾರ ಶ್ರೀನಿವಾಸ ಮೂತರ್ಿ ಕುಲಕಣರ್ಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ರುದ್ರೇಶ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ವಿವಿಧ ಶಾಲಾ ಕಾಲೇಜಿನ ಎನ್.ಎಸ್.ಎಸ್. ವಿದ್ಯಾಥರ್ಿಗಳು , ಶಿಕ್ಷಕರು, ಶಾಲಾ ಕಾಲೇಜು ವಿದ್ಯಾಥರ್ಿಗಳು, ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.