ಲಾಕ್ ಡೌನ್ ನಂತರ ನಷ್ಟ ತಪ್ಪಿಸಲು ಹೊಸ ಯೋಜನೆ ರೂಪಿಸಿ
ಹಾವೇರಿ: ಮೇ 29: ಕೋವಿಡ್ ಲಾಕ್ಡೌನ್ ಸಡಿಲಿಕೆ ನಂತರ ತ್ರೈಮಾಸಿಕ ಯೋಜನೆಗಳನ್ನು ರೂಪಿಸಿಕೊಂಡು ಸಾರಿಗೆ ನಷ್ಟವನ್ನು ಸರಿದೂಗಿಸಿ ಲಾಭ ತರುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಪ್ರತಿ ಮೂರು ತಿಂಗಳಿಗೊಮ್ಮೆ ಕ್ರಿಯಾ ಯೋಜನೆಗಳನ್ನು ಸಿದ್ದಮಾಡಿಕೊಳ್ಳಬೇಕು. ಉತ್ತಮ ಸೇವೆ ಜೊತೆಗೆ ಸಾರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಮಾಣಿಕವಾಗಿ ಶ್ರಮಿಸುವ ನಿಟ್ಟಿನಲ್ಲಿ ಕಾರ್ಯಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಯಾವ ಯಾವ ಮಾರ್ಗದಲ್ಲಿ ಸಾರಿಗೆ ಬಸ್ಗಳು ಓಡಾಡುತ್ತಿವೆ, ಈ ಪೈಕಿ ಯಾವ ರೂಟ್ಗಳು ಲಾಭದಾಯಕ, ಯಾವ ಮಾರ್ಗಗಳಲ್ಲಿ ನಷ್ಟ ಉಂಟಾಗುತ್ತಿದೆ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್ಗಳು ಓಡಾಡುತ್ತವೆ ಎಂಬುದನ್ನು ವಿಭಾಗವಾರು ಅಧಿಕಾರಿಗಳೊಂದಿಗೆ ಚಚರ್ಿಸಿ ಈ ಮಾರ್ಗಗಳಲ್ಲಿ ಲಾಭ ತರುವ ನಿಟ್ಟಿನಲ್ಲಿ ಯೋಜನೆಯನ್ನು ತಯಾರಿಸಿ. ಪ್ರತಿ ಮೂರು ತಿಂಗಳಿಗೊಮ್ಮೆ ಪ್ಲಾನ್ಮಾಡಿ ಸ್ಥಳೀಯ ಅಧಿಕಾರಿಗಳೊಂದಿಗೆ ಜನಪ್ರತಿನಿಧಿಗಳೊಂದಿಗೆ ಚಚರ್ಿಸಿ ಕ್ರಮವಹಿಸಿ ಎಂದು ಸೂಚನೆ ನೀಡಿದರು.
ನಷ್ಟದಲ್ಲಿರುವ ಮಾರ್ಗಗಳು ಯಾವ ಕಾರಣಕ್ಕೆ ಆದಾಯ ಬರುವುದಿಲ್ಲ ಎಂಬುದನ್ನು ಪತ್ತೆಮಾಡಿ. ಆ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಿ ಲಾಭ ತರುವ ಮಾರ್ಗಗಳಾಗಿ ಪರಿವತರ್ಿಸುವಂತೆ ಸಲಹೆ ನೀಡಿದರು. ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಬೇಕು, ಸವಕಳಿ ವೆಚ್ಚವನ್ನು ಕಡಿಮೆ ಮಾಡಬೇಕು, ಆದಾಯ ಸೋರಿಕೆ ತಡೆಯಬೇಕು. ರಸ್ತೆ ಸಾರಿಗೆ ಸಂಸ್ಥೆಗಳಿಗೆ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಸ್ವಚ್ಛತೆ, ಸಮಯಕ್ಕೆ ಸರಿಯಾಗಿ ವಾಹನ ಓಡಿಸುವ ಕೆಲಸವನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ರದ್ದುಮಾಡಿ: ಸಾರಿಗೆ ಬಸ್ ನಿಲ್ದಾಣ 500 ಮೀಟರ್ ವ್ಯಾಪ್ತಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವುದು, ಇಳಿಸುವುದು ಹಾಗೂ ಸಾಮಥ್ರ್ಯಕ್ಕೆ ಮೀರಿ ಪ್ರಯಾಣಿಕರನ್ನು ಕರೆದೊಯ್ಯುವುದು, ಪರವಾನಿಗೆ ಪಡೆಯದೆ ಬಸ್, ಟ್ರ್ಯಾಕ್ಸ್, ಟೆಂಪೋಟ್ರಾವೆಲ್ಸ್ ಓಡಾಟಕ್ಕೆ ಕಡಿವಾಣ ಹಾಕಬೇಕು. ಇಂತಹ ವಾಹನಗಳ ಪರಿವಾನಿಗೆಗಳನ್ನು ರದ್ದುಮಾಡಿ ಮೊಕದ್ದಮೆ ದಾಖಲಿಸಬೇಕು. ಸಾರಿಗೆ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಾಯವ್ಯ ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಕಾಯರ್ಾಚರಣೆಮಾಡಿ ಇವುಗಳಿಗೆ ಕಡಿವಾಣ ಹಾಕಿದರೆ ನಷ್ಟ ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಹೊಸ ಬಸ್ ಬೇಡಿಕೆ: ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಜಿಲ್ಲೆಯ ರಸ್ತೆ ಸಾರಿಗೆ ಸಂಸ್ಥೆಯ ಮೂಲ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನಿಷ್ಠ 100 ರಿಂದ 150 ಹೊಸ ಬಸ್ಗಳನ್ನು ಏಕ ಕಾಲದಲ್ಲಿ ನೀಡಬೇಕು. ಜಿಲ್ಲೆಯಲ್ಲಿ ಅವಶ್ಯವಿರುವ ಬಸ್ ನಿಲ್ದಾಣ, ಸಾರಿಗೆ ಡಿಪೋಗಳ ಉನ್ನತೀಕರಣ ಕಾಮಗಾರಿ, ನವೀಕರಣಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣಕುಮಾರ ಗುತ್ತೂರ ಅವರು ತಮ್ಮ ಕ್ಷೇತ್ರದ ರಸ್ತೆ ಸಾರಿಗೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಸಲ್ಲಿಸಿ ರಾಣೇಬೆನ್ನೂರು ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಗರದ ಹೊರ ವಲಯಕ್ಕೆ ಸ್ಥಳಾಂತರಿಸಬೇಕು. ಸವಣೂರು ಬಸ್ ನಿಲ್ದಾಣ, ಗುತ್ತಲ ಬಸ್ ನಿಲ್ದಾಣ ನವೀಕರಣ, ಹಾವೇರಿ ಬಸ್ ನಿಲ್ದಾಣದ ವಿಸ್ತರಣೆ ಹಾಗೂ ಕದರಮಂಡಲಗಿಗೆ ಹೊಸ ಬಸ್ ನಿಲ್ದಾಣ ನಿಮರ್ಾಣ, ಸವಣೂರು ಹೊಸ ಬಸ್ ಡಿಪೋ, ಹಾವೇರಿ ಕೇಂದ್ರೀಯ ವಿದ್ಯಾಲಯ ಸೇರಿದಂತೆ ಜಿಲ್ಲೆಯ ಸಾರಿಗೆ ಸಂಪರ್ಕವಿಲ್ಲದ ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವುದು, ಲಾಕ್ಡೌನ್ ಮುಗಿಯುವವರೆಗೂ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಟೋಲ್ ಫೀ ಸಂಗ್ರಹಿಸದಂತೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಸಾರಿಗೆ ಸಚಿವರ ಗಮನ ಸೆಳೆದರು.
ಈ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರಿಗೆ ಸಚಿವರು, ಆಯಾ ಕ್ಷೇತ್ರದ ಶಾಸಕರ ಬೇಡಿಕೆ ಹಾಗೂ ಸಚಿವರೊಂದಿಗೆ ಚಚರ್ಿಸಿ ಸಮಸ್ಯೆಗಳನ್ನು ಪರಿಹರಿಸಬೇಕು. ಹೊಸ ಕಟ್ಟಡ ಮತ್ತು ನವೀಕರಣಕ್ಕೆ ಕ್ರಿಯಾ ಯೋಜನೆ ರೂಪಿಸಿ. ಈ ಕಾಮಗಾರಿಗಳಿಗೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಜಿಲ್ಲಾ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಕ ಜಗದೀಶ್ ಅವರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ 544 ಬಸ್ಗಳಿವೆ, ನಿತ್ಯ 503 ಅನುಸೂಚಿ ಕಾಯರ್ಾಚರಣೆ ಮಾಡಲಾಗುತ್ತದೆ. ಪ್ರತಿದಿನ 1.82 ಲಕ್ಷ ಕಿ.ಮೀ. ವಾಹನಗಳು ಕ್ರಮಿಸುತ್ತವೆ. ನಿತ್ಯ 52.30 ಲಕ್ಷ ರೂ. ಆದಾಯ ಬರುತ್ತದೆ. 2312 ಜನ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 2019-20ನೇ ಸಾಲಿನಲ್ಲಿ 52 ಹೊಸ ಬಸ್ಗಳು ಬಂದಿವೆ, 39 ಹಳೆಯ ಬಸ್ಗಳನ್ನು ತೆಗೆದುಹಾಕಲಾಗಿದೆ. ಲಾಕ್ಡೌನ್ ಅವಧಿಯಲ್ಲಿ ಮಾಚರ್್ 22 ರಿಂದ ಮೇ 3ರವರೆಗೆ ಸಕರ್ಾರದ ಆದೇಶದಂತೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮೇ 4 ರಿಂದ 18ರವರೆಗೆ ಬಸ್ ಸಂಚಾರ ಆರಂಭಿಸಿ 61 ಅನುಸೂಚಿಗಳನ್ನು ಮಾತ್ರ ಕಾಯರ್ಾಚರಣೆ ಮಾಡಲಾಗುತ್ತಿದೆ. ಈ ಅವಧಿಯಲ್ಲಿ 5.91 ಲಕ್ಷ ರೂ. ಗಳಿಕೆಯಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್ ಸಂಚಾರ ಆರಂಭಿಸಿದ ಕಾರಣ ಪ್ರತಿ ಕಿ.ಮೀ. 20.62 ರೂ.ಗಳಿಸಿದೆ. ವಾಸ್ತವವಾಗಿ ಪ್ರತಿ ಕಿ.ಮೀ. 46 ರೂ. ವೆಚ್ಚವಾಗುತ್ತದೆ. ಈ ಅವಧಿಯಲ್ಲಿ ಪ್ರತಿ ಕಿ.ಮೀ.ಗೆ 35.28 ರೂ. ನಷ್ಟ ಸಂಸ್ಥೆಗೆ ಉಂಟಾಗಿದೆ. ಲಾಕ್ಡೌನ್ನಿಂದ ಮಾಚರ್್ 22 ರಿಂದ ಈವರೆಗೆ 41.15 ಕೋಟಿ ರೂ. ಸಾರಿಗೆ ಆದಾಯ ಗಳಿಕೆ ಕಡಿಮೆಯಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಬಿ.ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗ ಹಾಗೂ ಹುಬ್ಬಳ್ಳಿ ವಿಭಾಗದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 