ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಯೋಜನೆ ರೂಪಿಸಿ
Make a plan to improve SSLC results
ಹೂವಿನ ಹಡಗಲಿ 20 : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಯೋಜನೆ ರೂಪಿಸಿ ಜಾರಿಗೆ ತರಲು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಜಿ ಪಿ ಜಿ ಪ್ರೌಢಶಾಲೆಯಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ತಾಲೂಕಿನ ಪ್ರೌಢಶಾಲಾ ಮುಖ್ಯ ಗುರುಗಳ ಶೈಕ್ಷಣಿಕ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪಠ್ಯಕ್ರಮವನ್ನು ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳಿಸಬೇಕು.ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆ ನೀಡಿರಿ ಎಂದು ತಿಳಿಸಿದರು.ತಾಲೂಕಿನ 70 ಸರ್ಕಾರಿ ಶಾಲೆಗಳ ಆಸ್ತಿಗಳನ್ನು ಮುಖ್ಯ ಗುರುಗಳ ಹೆಸರಿಗೆ ಪಾಣಿ ಖಾತೆ ಬದಲಾವಣೆ ಮಾಡಿದೆ. ಉಳಿದ ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಮಾತನಾಡಿದರು.
ತಾಲೂಕು ದೈಹಿಕ ಪರೀವೀಕ್ಷಕರಾದ ರಫಿ ಅಹಮದ್ ಖವಾಸ್ . ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಎಚ್ ಮಲ್ಲಿಕಾರ್ಜುನ ಇದ್ದರು.ನಿವೃತ್ತ ಮುಖ್ಯ ಗುರುಗಳಾದ ಬಾಗಾರ ಲಿಂಗಪ್ಪ, ಲಕ್ಷ್ಮಣ್ ನಾಯ್ಕ್ ಹಾಗೂ ಕನ್ನಡ ಜಾಗೃತಿ ಜಿಲ್ಲಾ ಸಮಿತಿಗೆ ಆಯ್ಕೆ ಆದ ಸುರೇಶ ಅಂಗಡಿ ರವರಿಗೆ ಸನ್ಮಾನಿಸಲಾಯಿತು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 