ಪಿಎಂಶ್ರೀ (ಉರ್ದು)ಶಾಲೆಯ ಸದುಪಯೋಗಪಡಿಸಿಕೊಳ್ಳಿ: ಬಿಇಓ ಯಡ್ರಾಮಿ
Make good use of PMShri (Urdu) School: BEO Yadrami
ದೇವರಹಿಪ್ಪರಗಿ 17: ಸರಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡುವ ಪಿಎಂಶ್ರೀ(ಉರ್ದು) ಯೋಜನೆಗೆ ನಿಮ್ಮ ಶಾಲೆ ಆಯ್ಕೆಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಸಹಕಾರಿಯಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಕರೆ ನೀಡಿದರು. ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ (ಪಿಎಂ ಶ್ರೀ) ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಹಾಗೂ ಪಾಲಕ, ಪೋಷಕರ ಮತ್ತು ಶಿಕ್ಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದವರು. ಪಿಎಂಶ್ರೀ ತಾಲೂಕಿನಲ್ಲಿ ನಿಮ್ಮ (ಉರ್ದು ವಿಭಾಗದ)ಶಾಲೆ ಆಯ್ಕೆಯಾಗಿದ್ದು, ಇದರಿಂದ ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೆ?ಶ. ಇದರಿಂದ ನಾನಾ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗಲಿದೆ. ಪ್ರಾಥಮಿಕ, ಮಾಧ್ಯಮಿಕ ಹಾಗೂ ಕಾಲೇಜ ವಿಭಾಗದಲ್ಲಿ ಮುಂದೆ ವಿದ್ಯಾರ್ಥಿಗಳು ಇಲ್ಲಿ ಕಲಿಯಬಹುದಾಗಿದೆ.
ಆದಕಾರಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ, ಸೌಲಭ್ಯ ಹಾಗೂ ಮಕ್ಕಳ ಸಂಖ್ಯೆ ಹೆಚ್ಚಾಗಲು ಎಲ್ಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಪಾಲಕರು ಸಹಕರಿಸಬೇಕು ಬರುವಂತ ದಿನಗಳಲ್ಲಿ ಶಾಲಾ ಕೊಠಡಿಗಳ ಹಾಗೂ ಶೌಚಾಲಯಗಳ ಕೊರತೆ ನೀಗಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಶಿಕ್ಷಣ ಸಂಯೋಜಕ ಎಸ್.ಎಂ.ಕಪನಿಂಬರಗಿ, ಸಿ.ಆರಿ್ಪ ಸೋಮೇಶ ಪಾಟೀಲ, ಬಿ.ಆರಿ್ಪ ಪಿ.ಆರ್.ಕಾಚೂರ, ಮುಖ್ಯ ಗುರುಗಳಾದ ಎಂ.ಎ.ಹೆಬ್ಬಾಳ, ಶಿಕ್ಷಕ ಪೀರ್ಜಾದೆ ಸೇರಿದಂತೆ ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 