ಮತದಾರರ ಪಟ್ಟಿ ಪರಿಷ್ಕರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಾ. ರಾಮ್ ಪ್ರಸಾದ್ ಮನೋಹರ್

ಮತದಾರರ ಪಟ್ಟಿ ಪರಿಷ್ಕರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಾ. ರಾಮ್ ಪ್ರಸಾದ್ ಮನೋಹರ್  Make necessary preparations for the revision of the electoral roll: Dr. Ram Prasath Manohar

ಲೋಕದರ್ಶನ ವರದಿ 

ಧಾರವಾಡ, ಸೆ. 23: ಅಕ್ಟೋಬರ್ 1, 2026ರ ಅರ್ಹತಾ ದಿನಾಂಕ ಆಧರಿಸಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಪರಿಷ್ಕೃತ ಮತದಾರರ ಪಟ್ಟಿ ಸಿದ್ಧಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾದ್ ಮನೋಹರ್ ಸೂಚಿಸಿದರು.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಧಾರವಾಡ ಜಿಲ್ಲೆಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಸಭೆಯಲ್ಲಿ ಅವರು ಮಾತನಾಡಿದರು.  

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್‌., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ, ಹುಬ್ಬಳ್ಳಿ ತಹಶೀಲ್ದಾರ್ ಮಹೇಶ್ ಗಸ್ತೆ, ಎನ್‌ಎಚ್‌ಎಐ ವಿಶೇಷ ಭೂಸ್ವಾಧೀನಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.  ರಾಜಕೀಯ ಪಕ್ಷಗಳ ಮುಖಂಡರಾದ ಪ್ರಕಾಶ ಹಳಿಯಾಳ, ಪ್ರೇಮನಾಥ ಚಿಕ್ಕತುಂಬಳಿ, ಸಿದ್ದು ಕಲ್ಯಾಣಶೆಟ್ಟರ್, ಗುರುರಾಜ ಹುಣಸಿಮರದ, ಹಕ್ಕಿಮಹಮ್ಮದ್ ಗೋಲಂದಾಜ್, ಆನಂದ ಜಾದವ್ ಹಾಗೂ ರೇವಣಸಿದ್ದಪ್ಪ ಉಪಸ್ಥಿತರಿದ್ದರು.