ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ ಅರ್ಥಪೂರ್ಣ ಹಾಗೂ ವಿಜೃಂಭಣೆ ಆಚರಣೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಡಿಸಿ ಸೂಚನೆ

ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ ಅರ್ಥಪೂರ್ಣ ಹಾಗೂ ವಿಜೃಂಭಣೆ ಆಚರಣೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಡಿಸಿ ಸೂಚನೆ  Make necessary preparations to celebrate Ambedkar and Babu Jagjivan Ram Jayanti in a meaningful and

ವಿಜಯನಗರ (ಹೊಸಪೇಟೆ) 27:  ಹಸಿರು ಕ್ರಾಂತಿ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ರವರ 119ನೇ ಜಯಂತಿ ಮತ್ತು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಏಪ್ರಿಲ್ 14 ರಂದು ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್, ಮನ್ನಿಕೇರಿ ಅವರು ತಿಳಿಸಿದರು.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಹನಿಯರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಜಿಲ್ಲೆಯಲ್ಲಿ ಮಹನೀಯರ ಜಯಂತಿಯನ್ನು ಸಂಭ್ರಮದಿಂದ ಹಬ್ಬದಂತೆ ಆಚರಿಸಲಾಗುಗವುದು. ಏಪ್ರಿಲ್ 5 ರಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಪುತ್ಥಳಿಗೆ ಮಾಲಾರೆ​‍್ಣ ಮಾಡಲಾಗುವುದು. ಜಯಂತಿಯ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು. ತದನಂತರ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ ರಾಂ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.  

ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಈ ಇಬ್ಬರು ಮಹಾನ್ ನಾಯಕರ ಜಯಂತಿಗಳನ್ನು ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ನಗರದ ಪ್ರಮುಖ ವೃತ್ತಗಳು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಜಯಂತಿ ಕೇವಲ ಮೆರವಣಿಗೆಗೆ ಸೀಮಿತವಾಗಬಾರದು. ಇಂದಿನ ಯುವ ಪೀಳಿಗೆಗೆ ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಜಗಜೀವನ್ ರಾಮ್ ಅವರ ಕೃಷಿ ಮತ್ತು ಆಡಳಿತಾತ್ಮಕ ಸುಧಾರಣೆಗಳ ಬಗ್ಗೆ ಅರಿವು ಮೂಡಿಸಲು ಉಪನ್ಯಾಸ ಆಯೋಜಿಸಬೇಕು. ಅದಷ್ಟೇ ಅಲ್ಲದೆ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು. ಜಯಂತಿಯ ಅಂಗವಾಗಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಹನಿಯರ ಜಯಂತಿ ಆಚರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.