ವಿಕಲಚೇತನರಿಗೆ ಅವಕಾಶ ಕಲ್ಪಿಸಿ: ಸಂತೋಷ ಬಂಡೆ
Make room for the differently abled: Santhosh Bande
ಇಂಡಿ 04: ಮಕ್ಕಳು ವಿಕಲಚೇತನರೆಂದು ಅವರನ್ನು ಮನೆಯಲ್ಲೇ ಇರಿಸದೇ ಶಾಲೆಗಳಿಗೆ ಸೇರಿಸಿ ವಿಶೇಷ ಜ್ಞಾನ ನೀಡಿ, ಎಲ್ಲರಂತೆ ಸಾಮಾನ್ಯ ಜೀವನ ಸಾಗಿಸಲು ಅನುಕೂಲ ಕಲ್ಪಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ’ವಿಶ್ವ ವಿಕಲಚೇತನರ ದಿನ’ವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವದಲ್ಲಿ ಬಹಳಷ್ಟು ವಿಕಲಚೇತನರು ತಾವು ಯಾರಿಗಿಂತ ಕಡಿಮೆ ಇಲ್ಲ ಎಂಬುದನ್ನು ನಾನಾ ರಂಗಗಳಲ್ಲಿ ಸಾಧಿಸಿ ತೋರಿಸಿದ್ದಾರೆ. ಅಂಗವೈಕಲ್ಯ ಅವರ ಪ್ರತಿಭೆಗೆ ಅಡ್ಡಿಯಾಗದಂತೆ ಸಮಾಜ ಅವರಿಗೆ ಸಮಾನ ಅವಕಾಶಗಳನ್ನು ಕೊಡಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ವಿಕಲಾಂಗ ವ್ಯಕ್ತಿಗಳು ಕಲೆ, ವಿಜ್ಞಾನ, ಕ್ರೀಡೆ, ಸಂಗೀತ, ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಈ ದಿನವು ವಿಕಲಾಂಗ ವ್ಯಕ್ತಿಗಳ ಅಪಾರ ಸಾಮರ್ಥ್ಯವನ್ನು ಮತ್ತು ಅವರ ನಾಯಕತ್ವವನ್ನು ಸಶಕ್ತಗೊಳಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ ಎಂದು ಹೇಳಿದರು.
ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 