ಜಾತಿ ಸಮೀಕ್ಷೆಯನ್ನು ಯಶಸ್ವಿಗೊಳಿಸಿ: ಸಮಾಜಸೇವಕ ಮಂಜುನಾಥ.ಎಸ್.ಕಟ್ಟಿಮನಿ’
Make the caste survey a success: Social worker Manjunath S. Kattimani
ವಿಜಯಪುರ 26 : ಜಾತಿಗಣತಿ ಸಮೀಕ್ಷೆಯಲ್ಲಿ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಪಾಲ್ಗೊಂಡು ಸರಿಯಾದ ಮಾಹಿತಿಯನ್ನು ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲೆಯ ಅಂಬೇಡ್ಕರ್ವಾದಿಯೂ ಆಗಿರುವ ಸಮಾಜಸೇವಕರಾದ ಮಂಜುನಾಥ್.ಎಸ್. ಕಟ್ಟಿಮನಿ ಅವರು ಮನವಿ ಮಾಡಿದ್ದಾರೆ. ಜಾತಿ ಸಮೀಕ್ಷೆಯ ಸಂದರ್ಭದಲ್ಲಿ ಉಪಜಾತಿ ಕಾಲಂನಲ್ಲಿ ಹೊಲೆಯ ಅಥವಾ ಚಲವಾದಿ ಎಂದು ಯಾವುದಾದರೂ ಒಂದು ಸ್ಪಷ್ಟವಾಗಿ ನಮೂದಿಸದಿದ್ದರೆ ಈ ಜಾತಿಗಳಿಗೆ ಸೇರಿದವರ ಸಂಖ್ಯೆಯಲ್ಲಿ ಏರುಪೇರಾಗಿ ರಾಜಕೀಯ ಪ್ರಾತಿನಿಧ್ಯ, ಶಿಕ್ಷಣ, ಉದ್ಯೋಗ ಸೇರಿದಂತೆ ಸರ್ಕಾರದ ವಿವಿಧ ಯೋಜನೆ ಹಾಗೂ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ.
ಆದ್ದರಿಂದ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನರು ಬಹಳ ಎಚ್ಚರಿಕೆಯಿಂದ ಉಪಜಾತಿಯನ್ನು ನಮೂದಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಜಾತಿಗಣತಿಯ ಬಗ್ಗೆ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನರಿಗೆ ಇನ್ನಷ್ಟು ಅರಿವು ಮೂಡಿಸುವ ನಿಟ್ಟಿನಲ್ಲಿ ಸಮುದಾಯದ ಹಿರಿಯರು ಹಾಗೂ ಮುಖಂಡರು ಮನೆಮನೆಗಳಿಗೆ ಹಾಗೂ ಓಣಿಗಳಿಗೆ ಭೇಟಿ ನೀಡಿ ಸರಿಯಾದ ಮಾಹಿತಿ ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಗಣತಿದಾರರು ಮಾಹಿತಿ ಸಂಗ್ರಹಿಸಲು ಮನೆಗೆ ಬಂದಾಗ ಮಾಹಿತಿ ಕೊಡಲು ಸಾಧ್ಯವಾಗದಿದ್ದರೆ ಅಥವಾ ಮನೆಯಲ್ಲಿ ಇಲ್ಲದಿದ್ದರೆ ಸ್ಥಳೀಯವಾಗಿ ವ್ಯವಸ್ಥೆ ಮಾಡಿರುವ ಬೂತ್ ಕಚೇರಿಗೆ ಹೋಗಿ ಮಾಹಿತಿ ನೀಡಬೇಕು. ಅಥವಾ ಮೊಬೈಲ್ ಆಪ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 