ಕೈಗಾ ಅಣಕು ಕಾರ್ಯಚರಣೆ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ
Make the mock operation a success: DC
ಕಾರವಾರ, ನ.14 : ಕೈಗಾದಲ್ಲಿ ಡಿಸೆಂಬರ್ 11 ರಂದು ನಡೆಯುವ ಅಣಕು ಕಾರ್ಯಚರಣೆಯಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ, ಯಾವುದೇ ಲೋಪಗಳಾಗದಂತೆ ಕಾರ್ಯನಿರ್ವಹಿಸಿ ಕಾರ್ಯಚರಣೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕೈಗಾ ಅಣಕು ಕಾರ್ಯಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಣಕು ಕಾರ್ಯಚರಣೆ ಸಂದರ್ಭದಲ್ಲಿ ದೈನಂದಿನ ಸಾರ್ವಜನಿಕ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆಯಲ್ಲಿ ತೊಡಗಿಕೊಳ್ಳಬೇಕು, ಆರೋಗ್ಯ ಇಲಾಖೆ ,ಕಂದಾಯ ಇಲಾಖೆ, ಅಗ್ನಿಶಾಮಕ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಗಳಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡಬಾರದು ಎಂದರು.
ಕಾರ್ಯಚರಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆವತಿಯಿಂದ ಕಾಯಾಚರಣೆ ನಡೆಯುವ ವ್ಯಾಪ್ತಿಯ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಣಕು ಕಾರ್ಯಚರಣೆ ಆದರೂ ಕೂಡಾ ಅಂತಿಮದಲ್ಲಿ ಕಾರ್ಯಚರಣೆಯ ಎಲ್ಲಾ ಹಂತದ ಕುರಿತು ಪರಾಮರ್ಶೆ ನಡೆಯಲಿದ್ದು, ಯಾವುದೇ ಹಂತದಲ್ಲಿ ಲೋಪಗಳು ಸಂಭವಿಸದಂತೆ ಎಚ್ಚರವಹಿಸಬೇಕು. ವಿಪತ್ತು ಸಂಭವಿಸಿದಾಗ ನೈಜ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ನಿಗಧಿತ ಸಮಯದಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದೀಲೀಷ್ ಶಶಿ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಡಿ.ಎಫ್.ಓ. ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಕೈಗಾದ ಹಿರಿಯ ಅಧಿಕಾರಿಗಳಾದ ಅಮೋಲ್ ಶುಕ್ಲಾ, ಚಿತ್ತರಂಜನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 