ಅವಕಾಶ ಸದ್ಬಳಕೆ ಮಾಡಿಕೊಳ್ಳಿ: ಕೆ.ಸುರೇಶ
Make the most of the opportunity: K. Suresh
ಬಳ್ಳಾರಿ,ಜು.24: ಮಕ್ಕಳು ತಮ್ಮಲ್ಲಿರುವ ವಿವಿಧ ರೀತಿಯ ಕಲೆಯನ್ನು ಪ್ರದರ್ಶಿಸುವ ಅವಕಾಶ ಲಭಿಸಿದಲ್ಲಿ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪಟೇಲ್ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಕೆ.ಸುರೇಶ ಅವರು ಹೇಳಿದರು.
ಬುಧವಾರ ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ ನಗರ ತಾಲ್ಲೂಕು ಬಾಲಭವನ ಸಮಿತಿ, ಶಾಲಾ ಶಿಕ್ಷಣಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ “ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ” ಅಂಗವಾಗಿ ಏರಿ್ಡಸಿದ್ದ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಸಮೂಹ ನೃತ್ಯ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸೃಜನಾತ್ಮಕ ಹಾಗೂ ಕ್ರಿಯಾತ್ಮಾಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸುವುದರಿಂದ ಹೆಚ್ಚು ಅವಕಾಶಗಳು ದೊರೆಯುತ್ತವೆ ಎಂದು ತಿಳಿಸಿದರು.ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಜಯಶ್ರೀ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಉತ್ಸಾಹದಿಂದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಸಾಮಾಜಿಕ ಕೌಶಲ್ಯಗಳ ಮೂಲಕ ಸಹಕಾರ, ನಾಯಕತ್ವ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬಹುದು. ತಾಲ್ಲೂಕು ಬಾಲಭವನದ ವತಿಯಿಂದ ಏರಿ್ಡಸುವ ಸ್ಪರ್ಧೆಗಳಲ್ಲಿ ಮಕ್ಕಳು ಹೆಚ್ಚಿನ ಮಟ್ಟದಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಸೂಕ್ತ ವೇದಿಕೆ ಎಂದರು.
ಜಿಲ್ಲಾ ಬಾಲಭವನ ಸಮಿತಿಯ ಕಚೇರಿ ಸಹಾಯಕ ಜೀರ್ ಮಲ್ಲಿಕಾರ್ಜುನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕವುದೇ ಬಾಲಭವನದ ಉದ್ದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಸುಭದ್ರ.ಎಸ್., ಮರೀನಾ ಲಾರೆಟ್ಟಾ ಸೇರಿದಂತೆ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಚಿತ್ರಕಲೆ ಹಾಗೂ ಸಮೂಹ ನೃತ್ಯ ಸ್ಪರ್ಧೆ ಏರಿ್ಡಸಲಾಗಿತ್ತು. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಪೆನ್ ವಿತರಿಸಲಾಯಿತು.
*ಚಿತ್ರಕಲೆ ಸ್ಪರ್ಧೆ:*ಪ್ರಥಮ -ಅನುಶ್ರೀ (7ನೇ ತರಗತಿ) ಹಾಗೂ ವೈಷ್ಣವಿ (6ನೇ ತರಗತಿ)
ದ್ವಿತೀಯ -ದ್ರಾಕ್ಷಾಯಣಿ (5ನೇ ತರಗತಿ) ಹಾಗೂ ನಸೀಮ್ ಬಾನು (5ನೇ ತರಗತಿ)
ತೃತೀಯ -ಅಮೂಲ್ಯ (6ನೇ ತರಗತಿ).
*ಸಮೂಹ ನೃತ್ಯ ಸ್ಪರ್ಧೆ:*
ಪ್ರಥಮ -ನಾಗವೈಷ್ಣವಿ ತಂಡ (7ನೇ ತರಗತಿ)
ದ್ವಿತೀಯ -ಕೆ.ಲಕ್ಷ್ಮಿ ತಂಡ (8ನೇ ತರಗತಿ)
ತೃತೀಯ -ಪಲ್ಲವಿ ತಂಡ ಮತ್ತು ಹರಿಪ್ರಿಯಾ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 