ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ
Make the necessary preparations to celebrate Independence Day in a highly organized and meaningful m
ಲೋಕದರ್ಶನ ವರದಿ
ವಿಜಯಪುರ 28 : ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ಆಯೋಜಿಸಲಾಗುವ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿಸಲು ಎಲ್ಲ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 15ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.
ಸಮಾರಂಭಕ್ಕೆ ಆಗಮಿಸುವ ಗಣ್ಯರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಮಾಡಿಕೊಳ್ಳಬೇಕು. ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ, ವಾಹನ ನಿಲುಗಡೆ, ಭದ್ರತೆ ಹಾಗೂ ಆರೋಗ್ಯ ಸೇವೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ, ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುರಿತು ಸೂಕ್ತ ಪೂರ್ವಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು, ಅದೇ ದಿನ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯೂ ಇರುವುದರಿಂದ ಆ ಕಾರ್ಯಕ್ರಮಕ್ಕೂ ಅಗತ್ಯವಿರುವ ಸಿದ್ಧತೆಗಳನ್ನು ಸಕಾಲದಲ್ಲಿ ಮಾಡಿಕೊಳ್ಳಲು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪ್ರೊಬೇಷನರಿ ಐಪಿಎಸ್ ಅಧಿಕಾರಿ ಅಭಿಷೇಕ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 