ಪ್ರಜಾ ಸೇವಾ ಅಭಿಯಾನ ಯಶಸ್ವಿಗೊಳಿಸಿ: ಪಾಟೀಲ
Make the public service campaign a success: Patil
ಪ್ರಜಾ ಸೇವಾ ಅಭಿಯಾನ ಯಶಸ್ವಿಗೊಳಿಸಿ: ಪಾಟೀಲ
ಗದಗ, ಸೆ.12: ಜನತಾ ದರ್ಶನ ಮಾದರಿಯಲ್ಲಿ ಪ್ರಜಾ ಸೇವಾ ಅಭಿಯಾನವನ್ನೂ ಯಶಸ್ವಿಗೊಳಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕ ಡಾ. ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಗದಗ-ಬೆಟಗೇರಿ ರಸ್ತೆಯಲ್ಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ತಾರಾಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಅಭಿಯಾನ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ಬಾಗಿಲಿಗೆ ಬಂತು ಇರಲಿ ಸಹಕಾರ” ಎಂಬ ಆಶಯದಡಿ ನಡೆಯುತ್ತಿರುವ ಅಭಿಯಾನದ ಉದ್ದೇಶ ಸಾರ್ವಜನಿಕರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವುದು, ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಒದಗಿಸುವುದಾಗಿದೆ. ಜನರು ಕಚೇರಿಯಿಂದ ಕಚೇರಿಗೆ ಅಲೆದಾಡದಂತೆ ಅಧಿಕಾರಿಗಳು ಅರ್ಜಿಗಳನ್ನು ಪರೀಶೀಲಿಸಿ, ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.
ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಒಟ್ಟು **445 ಅರ್ಜಿಗಳು** ಸ್ವೀಕೃತವಾಗಿವೆ. ಈ ಪೈಕಿ **380 ಅರ್ಜಿಗಳು ಮನೆಗಳಿಗಾಗಿ** ಸಲ್ಲಿಕೆಯಾಗಿವೆ. ಅರ್ಜಿದಾರರ ಅರ್ಹತೆ ಮತ್ತು ದಾಖಲೆಗಳನ್ನು ಪರೀಶೀಲಿಸಿ, ಅರ್ಹರಿಗೆ ಮೂರು ದಿನಗಳೊಳಗಾಗಿ ಕಾನೂನುಬದ್ಧವಾಗಿ ಮನೆಗಳ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪಾಟೀಲ ಸೂಚಿಸಿದರು.
ಗದಗ ಜಿಲ್ಲೆಯಲ್ಲಿ ಮನೆಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮನೆಗಳ ಹಕ್ಕುಪತ್ರ ಹಾಗೂ ವಸತಿ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ಬಾರಿ ಜನತಾ ದರ್ಶನ ನಡೆಸಲಾಗಿದ್ದು, **2,987ಕ್ಕೂ ಹೆಚ್ಚು ಅರ್ಜಿಗಳು** ಸ್ವೀಕೃತವಾಗಿವೆ. ಅವುಗಳಲ್ಲಿ ಬಹುತೇಕ ಅರ್ಜಿಗಳು ವಿಲೇವಾರಿಯಾಗಿದ್ದು, ಪ್ರಸ್ತುತ 147 ಅರ್ಜಿಗಳು ಮಾತ್ರ ಬಾಕಿ ಉಳಿದಿವೆ. ಇದೇ ಮಾದರಿಯಲ್ಲಿ ಪ್ರಜಾ ಸೇವಾ ಅಭಿಯಾನದಲ್ಲಿಯೂ ಅರ್ಜಿಗಳ ವಿಲೇವಾರಿ ಜತೆಗೆ ಅರ್ಜಿದಾರರಿಗೆ ಮಾಹಿತಿ ನೀಡುವ ಹಾಗೂ ಸೇವೆಗಳು ತಲುಪುವವರೆಗೆ ಮೇಲ್ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಾಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 