ಆರೋಗ್ಯಯುತ ಜೀವನಕ್ಕಾಗಿ ಯೋಗ ದೈನಂದಿನ ಭಾಗವಾಗಿಸಿಕೊಳ್ಳಿ : ಜಿಲ್ಲಾಧಿಕಾರಿ
Make yoga a part of your daily routine for a healthy life: District Collector
ಲೋಕದರ್ಶನ ವರದಿ
ವಿಜಯಪುರ 21: ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಯೋಗವು ಜಗತ್ತಿಗೆ ನಮ್ಮ ದೇಶ ನೀಡಿರುವ ಅತ್ಯಂತ ಹೆಮ್ಮೆಯ ಕೊಡುಗೆಯಾಗಿದ್ದು, ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಇಂದಿನ ಆಧುನಿಕ ಜೀವನಶೈಲಿಯಲ್ಲಿ ಎದುರಾಗುತ್ತಿರುವ ಒತ್ತಡ, ಆತಂಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಯೋಗ ಸಂಜೀವಿನಿಯಾಗಿದೆ.ಮನಸ್ಸು ಮತ್ತು ದೇಹದ ಸದೃಢತೆಗೆ ಯೋಗವು ಬಹು ಮುಖ್ಯವಾಗಿದ್ದು, ಪ್ರತಿನಿತ್ಯ ನಿಯಮಿತವಾಗಿ ಯೋಗಾಭ್ಯಾಸ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಿರೋಗಿ ಹಾಗೂ ಸುಂದರ ಜೀವನ ನಡೆಸಲು ಸಾಧ್ಯ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸಿದ್ರಾಮಪ್ಪ ಕರಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ.ವಿದ್ಯಾವತಿ ಅಥಣಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ಧೈವಾಡಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ಆಯುಷ್ ಇಲಾಖೆಯ ಆರ್.ಎಸ್. ಪಾಟೀಲ, ಡಾ. ಮಹೇಶ ನಾವದಗಿ, ಸಂಜು ಕುಲಕರ್ಣಿ, ಪಾಟೀಲ, ದೇಸಾಯಿ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು,ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ವಿವಿಧ ಆಯುರ್ವೇದ ಮತ್ತು ಯುನಾನಿ ಕಾಲೇಜುಗಳ ಸಿಬ್ಬಂದಿ, ಎನ್‌ಸಿಸಿ ಕೆಡೆಟ್‌ಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 