ತ್ರಿಚಿ, ಜ 11, ಶಾಲೆ ಕಾಲೇಜುಗಳಲ್ಲಿ ಶಿಕ್ಷಣದ ಜತೆಗೆ ಯೋಗ ತರಬೇತಿಗೆ ಆದ್ಯತೆ ನೀಡಬೇಕು ಎಂದು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ ಶ್ರೀಮದ್ ಆಂಡವನ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿನ ಭಾಷಣದಲ್ಲಿ ಈ ಕುರಿತು ಪ್ರಸ್ತಾಪಿಸಿದ ಉಪ ರಾಷ್ಟ್ರಪತಿ, ಶಿಕ್ಷಣವು ವಿದ್ಯಾರ್ಥಿಗಳನ್ನು ಪೋಷಿಸಬೇಕು ಮತ್ತು ಸಜ್ಜುಗೊಳಿಸಬೇಕು. ಯಾವುದೇ ಪ್ರತಿಕೂಲತೆಯನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವ ಯುವಪೀಳಿಗೆ ತಯಾರಾಗಬೇಕು ಎಂದರು.
ಇಂದಿನ ಫಿಟ್‍ನೆಸ್ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ಭೌತಿಕವಾಗಿ ನೀಡಲು ಕಾಲೇಜುಗಳು ಗಮನ ಹರಿಸಬೇಕು. ದೇಶದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳು ಹರಡುತ್ತಿದ್ದು, ಇದನ್ನೂ ಸಹ ನಿರ್ಲಕ್ಷಿಸುವಂತಿಲ್ಲ. ಈ ನಿಟ್ಟಿನಲ್ಲಿ ಜಂಕ್ ಫುಡ್ ಅನ್ನು ತಪ್ಪಿಸಿ ಆರೋಗ್ಯಕರ ಆಹಾರ ಪದ್ಧತಿಗಳನ್ನು ಬೆಳೆಸಿಕೊಳ್ಳಬೇಕು. ಒಬ್ಬ ವ್ಯಕ್ತಿಯ ಒಟ್ಟಾರೆ ಯೋಗಕ್ಷೇಮದಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.