ಮಲೇಷಿಯಾ ಪ್ರಧಾನಿ ಮಹತಿರ್ ಮೊಹಮದ್ ರಾಜೀನಾಮೆ
ಕೌಲಾಲಂಪುರ, ಫೆ 24, ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮದ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ‘ಮಹತಿರ್ ಮೊಹಮದ್ ಅವರು ಇಂದು ಮಲೇಷ್ಯಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ರಾಜೀನಾಮೆ ಪತ್ರವನ್ನು ಮಧ್ಯಾಹ್ನ ಮಲೇಷಿಯಾದ ರಾಜರಿಗೆ ಸಲ್ಲಿಸಲಾಗಿದೆ’ ಎಂದು ಪ್ರಧಾನಮಂತ್ರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ರತಿಪಕ್ಷಗಳು ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು ಭಾನುವಾರ ಸಭೆಗಳನ್ನು ನಡೆಸುವ ಮೂಲಕ ರಾಜಕೀಯ ಮರುಮೈತ್ರಿಯನ್ನು ಯೋಜಿಸುತ್ತಿವೆ ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ. ಪಕಾಟನ್ ಹರಪನ್ ಎಂದು ಕರೆಯಲ್ಪಡುವ ‘ಅಲೈಯನ್ಸ್ ಆಫ್ ಹೋಪ್’ ಒಕ್ಕೂಟ ಮೇ 2018 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದ ನಂತರ ಮಹತಿರ್ ಮಲೇಷ್ಯಾ ಪ್ರಧಾನಿಯಾಗಿ ಅಧಿಕಾರಕ್ಕೇರಿದ್ದರು. ಮಹತಿರ್ ಅವರು ಪಕಾಟನ್ ಹರಪನ್ ಒಕ್ಕೂಟದ ನಾಲ್ಕು ಮೈತ್ರಿ ಪಕ್ಷಗಳಲ್ಲಿ ಒಂದಾದ ಪ್ರಿಬುಮಿ ಬರ್ಸಾಟು ಮಲೇಷ್ಯಾ (ಪಿಪಿಬಿಎಂ) ನ ಅಧ್ಯಕ್ಷರೂ ಆಗಿದ್ದಾರೆ. ಮಹತಿರ್ ಅವರ ರಾಜೀನಾಮೆ ಹೇಳಿಕೆಗೂ ಮುನ್ನ ಪಿಪಿಬಿಎಂ ಅಧ್ಯಕ್ಷ ಮುಹಿದ್ದೀನ್ ಯಾಸಿನ್ ಹೇಳಿಕೆ ನೀಡಿ, ಫೆ 23 ರಂದು ನಡೆದ ಸಭೆಯ ನಂತರ ಪಕಟಾನ್ ಹರಪನ್ ಒಕ್ಕೂಟವನ್ನು ತ್ಯಜಿಸಲು ಪಕ್ಷದ ಸರ್ವೋಚ್ಛ ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
‘ಸಂಸತ್ ನ ಎಲ್ಲ ಸದಸ್ಯರು ಸಹ ಪಕಾಟನ್ ಹರಪನ್ ನಿಂದ ಹೊರಗಿದ್ದಾರೆ. ಮಹತೀರ್ ಮೊಹಮದ್ ಅವರನ್ನು ಮಲೇಷ್ಯಾ ಪ್ರಧಾನ ಮಂತ್ರಿಯಾಗಿ ಮುಂದುವರಿಸಲು ಪಕ್ಷದ ಎಲ್ಲರೂ ಪ್ರಮಾಣ ಪತ್ರಕ್ಕೆ ಸಹಿ ಹಾಕಿದ್ದಾರೆ.’ ಎಂದು ಪಿಪಿಬಿಎಂ ಅಧ್ಯಕ್ಷರು ಹೇಳಿದ್ದಾರೆ. ‘ದೇಶದ ಸದ್ಯದ ಮತ್ತು ಭವಿಷ್ಯದ ರಾಜಕೀಯ ಬೆಳವಣಿಗೆಗಳನ್ನು ಗಣನೆಗೆ ತೆಗೆದುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.’ ಎಂದು ಮುಹಿದ್ದೀನ್ ಯಾಸಿನ್ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 