ಅಧ್ಯಕ್ಷರು ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆ ತಾಲೂಕ ಅಧ್ಯಕ್ಷರಾಗಿ ಮಲ್ಲನಗೌಡ ಪಾಟೀಲ ಆಯ್ಕೆ
Mallanagowda Patil elected as Taluka President of Koppal District Citizens Forum
ಲೋಕದರ್ಶನ ವರದಿ
ಯಲಬುರ್ಗಾ 17: ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯ ತಾಲೂಕ ಅಧ್ಯಕ್ಷರಾಗಿ ಅಪರ ಸರಕಾರಿ ವಕೀಲರಾದ ಮಲ್ಲನಗೌಡ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತರಾದ ರವಿಕುಮಾರ ಛಲವಾದಿ ಅವರನ್ನು ನೇಮಕ ಮಾಡಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಮಹೇಶಬಾಬು ಸುರ್ವೇ ನೇಮಕ ಮಾಡಿ ಆದೇಶ ಹೋರಡಿಸಿದ್ದಾರೆ. ಜಿಲ್ಲೆಯಾದ್ಯಂತ ನಾಗರಿಕ ವೇದಿಕೆಯ ಸಂಘಟನೆ ಮಾಡುವ ನಿಟ್ಟಿನಲ್ಲಿ ನೇಮಕ ಮಾಡಲಾಗಿದೆ ಎಂದರು.
ನಂತರ ನಮ್ಮ ಪತ್ರಿಕೆ ಜೋತೆ ಮಾತನಾಡಿದ ನೂತನ ಅಧ್ಯಕ್ಷರಾದ ಮಲ್ಲನಗೌಡ್ರ ಪಾಟೀಲ ರಾಜ್ಯಾದ್ಯಂತ ಕನ್ನಡ ನಾಡು ನುಡಿಗಾಗಿ ಸದಾ ಪ್ರತಿಯೊಂದು ಕನ್ನಡ ಕಾರ್ಯಕ್ರಮದಲ್ಲಿ ತನ್ನದೆ ಆದಂತಹ ಕೊಡುಗೆ ನೀಡುತ್ತಿರುವ ಹಾಗೂ ವಿಶೇಷವಾಗಿ ಕೊಪ್ಪಳ ಜಿಲ್ಲಾ ಉತ್ಸವ ಇಟಗಿ ಉತ್ಸವ ಸೇರಿದಂತೆ ಅನೇಕ ಮಹನೀಯರ ಬಗ್ಗೆ ಸದಾ ಒಂದಿಲ್ಲೊಂದು ವಿಶೇಷ ವಿಭಿನ್ನವಾದ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿರುವ ನಮ್ಮ ಕೊಪ್ಪಳ ನಾಗರಿಕ ವೇದಿಕೆಯನ್ನು ಅತ್ಯಂತ ಜನಪ್ರಿಯ ಹಾಗೂ ಪ್ರತಿಯೊಬ್ಬ ಕನ್ನಡದ ಮನಸ್ಸುಗಳು ಒಪ್ಪುವಂತಹ ಕಾರ್ಯಗಳನ್ನು ತಾಲೂಕಿನಲ್ಲಿ ನಿರಂತರವಾಗಿ ಇನ್ನೂ ಮುಂದೆ ಮಾಡಲಾಗುವದು ಎಂದರು.
ಈ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಿವಮೂರ್ತಿ ಇಟಗಿ, ಪತ್ರಕರ್ತರಾದ ಉಮಾಶಂಕರ್ ಹಿರೇಮಠ, ಭೀಮಣ್ಣ ಹವಳಿ, ಸ,ಶರಣಪ್ಪ ಪಾಟೀಲ, ಶಿವಕುಮಾರ ಮ್ಯಾಗೇರಿ, ವಿರೇಶ ಸ್ಟಾಂಪಿನ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.ಕಾರ್ಯದರ್ಶಿ
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 