ಸಂಭ್ರಮದ ಬೆಟ್ಟದ ಮಲ್ಲೇಶ್ವರ ಸ್ವಾಮಿ ರಥೋತ್ಸವ
Malleshwara Swamy Chariot Festival on the hill of Sambraham
ಸಂಭ್ರಮದ ಬೆಟ್ಟದ ಮಲ್ಲೇಶ್ವರ ಸ್ವಾಮಿ ರಥೋತ್ಸವ
ಲೋಕದರ್ಶನ ವರದಿ
ಹೂವಿನಹಡಗಲಿ 09: ತಾಲ್ಲೂಕಿನ ಐತಿಹಾಸಿಕ ಸೋಗಿ ಬೆಟ್ಟದ ಮಲ್ಲೇಶ್ವರ ಕ್ಷೇತ್ರದಲ್ಲಿ ಬುಧವಾರ ಸಂಜೆ ಮಲ್ಲೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು.ಪಲ್ಲಕ್ಕಿಯಲ್ಲಿ ದೇವಸ್ಥಾನದಿಂದ ಸಾಗಿಬಂದ ಸ್ವಾಮಿಯ ಉತ್ಸವಮೂರ್ತಿ ರಥಕ್ಕೆ ಪ್ರದಕ್ಷಿಣೆ ಹಾಕಿದ ಬಳಿಕ ರಥೋತ್ಸವ ಪ್ರಾರಂಭವಾಯಿತು. ಬೆಟ್ಟದ ಹಸಿರು ಪರಿಸರದಲ್ಲಿ ಅಪಾರ ಭಕ್ತರ ಜಯಘೋಷ, ಹರ್ಷೋದ್ಗಾರ ಮುಗಿಲುಮುಟ್ಟಿತು.ಭಕ್ತರು ಬಾಳೆಹಣ್ಣು. ಉತ್ತತ್ತಿ ಎಸೆಯುವ ಮೂಲಕ ಭಕ್ತಿ ಸಮರ್ಿಸಿದರು. ಹೂವಿನಹಡಗಲಿ ಹಾಗೂ ನೆರೆಯ ತಾಲ್ಲೂಕಿನ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಆಶೀರ್ವಾದ ಪಡೆದರು. ಸುಕ್ಷೇತ್ರ ಸುತ್ತ-ಮುತ್ತಲಿನ ಹಳ್ಳಿಗಳ ರೈತರು ಕುಟುಂಬ ಪರಿವಾರದೊಂದಿಗೆ ಬಂದಿದ್ದರು. ರಥೋತ್ಸವ ನಿಮಿತ್ತ ಬೆಳಿಗ್ಗೆ ಸ್ವಾಮಿಗೆ ರುದ್ರ ಅಭಿಷೇಕ. ವಿಶೇಷ ಪೂಜೆ ಸಲ್ಲಿಸಲಾಯಿತು. ಸೋಗಿ ಬಿಜೆಪಿ ಮುಖಂಡರಾದ ಎಂ.ಬಿ.ಬಸವರಾಜ ಅವರು ಅನ್ನಸಂತರೆ್ಣ ಏರಿ್ಡಸಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 