ಕಲಕುಟಗರಗೆ ವಿಜಯಪುರಕ್ಕೆ ಸ್ವಾಗತಿಸಿದ ಮಲ್ಲಿಕಾರ್ಜುನ ಕೆಂಗನಾಳ
Mallikarjuna Kenganal welcomes Kalakutaga to Vijayapura
ಕಲಕುಟಗರಗೆ ವಿಜಯಪುರಕ್ಕೆ ಸ್ವಾಗತಿಸಿದ ಮಲ್ಲಿಕಾರ್ಜುನ ಕೆಂಗನಾಳ
ವಿಜಯಪುರ 06: ಸ್ವಾತಂತ್ರ್ಯ, ಸಮಾನತೆ,ಪ್ರಜಾಪ್ರಭುತ್ವ ಉಳುವಿಗಾಗಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತಕ್ಕಾಗಿ ಬಾಗಲಕೋಟದ ಸಾಮಾಜಿಕ ಹೋರಾಟಗಾರ ನಾಗರಾಜ ಶಿ ಕಲಕುಟಗರ ಅವರು ರಾಜ್ಯದಲ್ಲಿ ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಜನ ಜಾಗೃತಿ ಅಭಿಯಾನದ ಅಂಗವಾಗಿ ವಿಜಯಪುರಕ್ಕೆ ಆಗಮಿಸಿದ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹಾಗೂ ವಿವಿಧ ಮುಖಂಡರು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಮುಂದೆ ಹುಮಾಲೆ ಹಾಕಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತ ನೀಡುವುದು ನಮ್ಮ ರೈತ ಭಾರತ ಪಕ್ಷದ ಉದ್ದೇಶವಾಗಿದೆ. ನಾಗರಾಜ ಕಲಕುಟಗರ ಅವರು ಹಮ್ಮಿಕೊಂಡಿರುವ ಸ್ವಚ್ಛ ವಿಧಾನ ಸಭೆ ಅಭಿಯಾನವು ಜನಪರವಾಗಿದ್ದು ಅವರ ಕಾರ್ಯ ಶ್ಲಾಘನೀಯವಾದದ್ದು ಅವರ ಈ ಅಭಿಯಾನಕ್ಕೆ ನಮ್ಮ ರೈತ ಭಾರತ ಪಕ್ಷ ಬೆಂಬಲಿಸುತ್ತದೆ ಎಂದರು.ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಗೀರೀಶ ಕಲಘಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 